Lockdown ದೆಹಲಿಯಲ್ಲಿ ಇಂದು ರಾತ್ರಿಯಿಂದಲೇ ಲಾಕ್ ಡೌನ್
ದೆಹಲಿ : ಕೊರೊನಾ ಸ್ಫೋಟ ಹಿನ್ನೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿ ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ದೆಹಲಿಯಲ್ಲಿ ಭಾನುವಾರ ಒಂದೇ ದಿನ 25,462 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 161 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಲಾಕ್ ಡೌನ್ ಮಾಡಲಾಗಿದೆ.
ಈ ಕುರಿತಂತೆ ಸಿಎಂ ಕೇಜ್ರಿವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇಂದಿನ ರಾತ್ರಿಯಿಂದಲೇ ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೆ ಬರಲಿದೆ.









