ಇಂದಿನಿAದ ಒಂದು ವಾರಗಳ ಕಾಲ ಲಾಕ್ ಡೌನ್ ಹಿನ್ನೆಲೆ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆಗೆ ವಿಧಾನಸೌಧದಲ್ಲಿ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪೊಲೀಸ್ ಕಮಿಷನರ್ ಬಾಸ್ಕರ್ ರಾವ್, ಡಿಜಿಪಿ ಪ್ರವೀಣ್ ಸೂದ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರು. ಬೊಮ್ಮಾಯಿ ಅವರು ಲಾಕ್ ಡೌನ್ ಸಮಯದಲ್ಲಿ ಕೆಲ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವ ಕುರಿತಾಗಿ ಸಭೆಯಲ್ಲಿ ಸೂಚಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಲಾಕ್ ಡೌನ್ ಪರಿಸ್ಥಿತಿ ನಿಯಂತ್ರಣ, ಭದ್ರೆತ ಜನಜೀವನ ಹಾಗೂ ಇತರೇ ವಿಚಾರಗಳ ಕುರಿತಾಗಿ ಚರ್ಚೆ ನಡೆದಿದೆ.
ಸಭೆ ಬಳಿಕ ಮಾತನಾಡಿರುವ ಬೊಮ್ಮಾಯಿ ಪೊಲೀಸ್ ಇಲಾಖೆಯಿಂದ ಬೆಂಗಳೂರು ಹಾಗೂ ಗ್ರಾಮಾಂತರ ಜಿಲ್ಲೆಗ¼ಲ್ಲಿ ಲಾಕ್ ಡೌನ್ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಸಿದ್ಧತೆಗಳು ನಡೆದಿವೆ. ಹಲವಾರು ಬ್ಯಾರಿಕೇಡ್ ಗಳನ್ನ ಅಳವಡಿಸಿ ಚೆಕ್ ಪೋಸ್ಟ್ ಗಳನ್ನೂ ಸ್ಥಾಪಿಸಲಾಗಿದೆ. ಪ್ಲೆöÊ ಓವರ್ ಗಳಬನ್ನ ಬಂದ್ ಮಾಡಲಾಗಿದೆ. ಈಗಾಗಲೇ ವಾಹನ ದಟ್ಟಣೆ ಕಡಿಮೆಯಿದ್ದು, ಲಾಕ್ ಡೌನ್ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದ್ರು.








