Koppal ಲಾಕ್ ಡೌನ್ ಎಫೆಕ್ಟ್ : 7 ಕಿ.ಮೀ ನಡೆದ ತುಂಬು ಗರ್ಭಿಣಿ
ಕೊಪ್ಪಳ : ಲಾಕ್ ಡೌನ್ ಹಿನ್ನೆಲೆ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ತುಂಬು ಗರ್ಭಿಣಿ ಆಸ್ಪತ್ರೆಗೆ ಹೋಗಲು ಪರಡಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ನರೇಗಲ್ ಗ್ರಾಮದ ಲಕ್ಷ್ಮೀ ಪೂಜಾರ ಅವರು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ಚೆಕಪ್ ಗೆ ಹೋಗಬೇಕಿತ್ತು.
ಆದರೆ ಗ್ರಾಮದ ಎಲ್ಲ ವಾಹನ ಚಾಲಕರು ಪೊಲೀಸರಿಗೆ ಹೆದರಿ ಗರ್ಭಿಣಿಯನ್ನ ಆಸ್ಪತ್ರೆಗೆ ಕರೆ ತರಲು ನಿರಾಕರಿಸಿದ್ದರು.
ಇದರಿಂದ ಗ್ರಾಮದಿಂದ 7 ಕಿಮೀ ಕಾಲ್ನಡಿಗೆಯಲ್ಲೆ ಕೊಪ್ಪಳಕ್ಕೆ ಆಗಮಿಸಿದ್ದ ಗರ್ಭಿಣಿಯು ನಗರದಲ್ಲೂ ಹೆದ್ದಾರಿ ರಸ್ತೆಯ ಮೂಲಕ ಖಾಸಗಿ ಆಸ್ಪತ್ರೆಗೆ ಕಾಲ್ನಡಿಗೆಯಲ್ಲೆ ತೆರಳುತ್ತಿದ್ದರು.
ಇದನ್ನು ಗಮನಿಸಿದ ಮಾಧ್ಯಮ ಮಿತ್ರರು ಅವರಿಗೆ ಕಾರಿನ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.