ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ.. ಆದ್ರೆ
ಬೆಂಗಳೂರು : ಜೂನ್ ಏಳರ ನಂತರ ಲಾಕ್ ಡೌನ್ ವಿಸ್ತರಣೆ ಆಗುತ್ತಾ ಇಲ್ವಾ ಅನ್ನೋ ಪ್ರಶ್ನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದು, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳು ಲಾಕ್ ಡೌನ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೊರೊನಾ ನಿಯಂತ್ರಣವಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುತ್ತೇವೆ.
ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಲಾಕ್ ಡೌನ್ ನಲ್ಲಿ ಏನು ಮಾಡಬೇಕು ಎನ್ನುವುದರ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ.
ಕೈಗಾರಿಕೆಗಳ ರಫ್ತು ಘಟಕಗಳಿಗೆ ಮಾತ್ರ ಅನುಮತಿ ನೀಡುತ್ತೇವೆ. ಕೆಲವೊಂದಕ್ಕೆ ಮಾತ್ರ ವಿನಾಯಿತಿ ಕೊಡುವ ಬಗ್ಗೆ ಸಂಜೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಇನ್ನು ನಾಳೆಯಿಂದ ರಫ್ತು ಆಧಾರಿತ ಸೇವೆ ಆರಂಭವಾಗಲಿದೆ. ಲಾಕ್ ಡೌನ್ ಸಡಿಲ ಹೇಗೆ ಮಾಡಬೇಕು ಎನ್ನುವುದರ ಬಗ್ಗೆಯೂ ಚರ್ಚೆ ಮಾಡುತ್ತೇವೆ.
ವಿಸ್ತರಣೆ ಮಾಡಿ ಬಿಗಿ ಕ್ರಮ ತೆಗೆದುಕೊಂಡು ಹೇಗೆ ಹೋಗಬೇಕು ಎಂಬುದರ ಬಗ್ಗೆ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.