ದೆಹಲಿಯಲ್ಲಿ ಮೇ.17ರವರೆಗೆ ಲಾಕ್ ಡೌನ್ ವಿಸ್ತರಣೆ Lockdown
ದೆಹಲಿ : ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಸದ್ಯದ ಲಾಕ್ ಡೌನ್ ಅನ್ನು ಮೇ.17ರವರೆಗೆ ವಿಸ್ತರಣೆ ಮಾಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಲಾಕ್ ಡೌನ್ ವಿಸ್ತರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್, ದೆಹಲಿಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮತ್ತೆ ಮೇ.17ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಈ ವೇಳೆಯಲ್ಲಿ ಮೆಟ್ರೋ ಸಂಚಾರವನ್ನು ಕೂಡ ನಿಷೇಧ ಮಾಡಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ವಿಧಿಸಿದ್ದ ಲಾಕ್ ಡೌನ್ ನಾಳೆಗೆ ಅಂತ್ಯವಾಗುತ್ತಿತ್ತು.
ಆದ್ರೆ ದೆಹಲಿಯಲ್ಲಿ ಕೊರೊನಾ ಕಂಟ್ರೋಲ್ ಗೆ ಬರದ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದಾರೆ.