ರಾಜ್ಯದಲ್ಲಿ ಜೂನ್ 14ರ ತನಕ ಲಾಕ್‍ಡೌನ್ ವಿಸ್ತರಣೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ ಗೆ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಜೂನ್ 14ರ ವರೆಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಅಧಿಕೃತ ಪ್ರಕಟಣೆ ಮತ್ತು ಮರ್ಗಸೂಚಿ ಶೀಘ್ರವೇ ಹೊರ ಬರಲಿದೆ.
ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ಹೊಸ ಮಾರ್ಗಸೂಚಿ ಬಗ್ಗೆ ವಿವರವಾಗಿ ತಿಳಿಸಲಿದ್ದಾರೆ..

ರಾಜ್ಯದ ಆರ್ಥಿಕ ಪರಿಸ್ಥತಿ ಗಮನದಲ್ಲಿಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪ ಕೆಲವು ವಿನಾಯಿತಿಗಳನ್ನು ನೀಡಲಿದ್ದಾರೆ.
ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈಗಾಗಲೇ ಸುಳಿವು ನೀಡಿದ್ದಾರೆ.
ಕೊರೊನಾ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಚಿಸಲಾಗಿರುವ ತಜ್ಞರ ಸಮಿತಿಯೊಂದಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಖ್ಯಾತ ವೈದ್ಯರಾದ ಡಾ.ದೇವಿ ಶೆಟ್ಟಿ, ಡಿಸಿಎಂ ಡಾ. ಅಶ್ವಥ ನಾರಾಯಣ,
ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯ ಕರ್ಯರ್ಶಿ ಪಿ.ರವಿಕುಮಾರ್, ವಿವಿಧ ಇಲಾಖೆ ತಜ್ಞರುಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.