ನಾಳೆಯಿಂದ ಹೋಟೆಲ್ ಗಲ್ಲಿ ಟೇಬಲ್ ಸರ್ವಿಸ್ ಆರಂಭ
ಬೆಂಗಳೂರು: ಕೊರೊನಾ 2ನೇ ಅಲೆ ನಿವಾರಣೆಗೆ ರಾಜ್ಯ ಸರ್ಕಾರ ಹೇರಿದ್ದ ಲಾಕ್ ಡೌನ್ ಅನ್ನ ಸಡಿಲಿಕೆ ಮಾಡಿಕೊಂಡು ಬರುತ್ತಿದೆ.. ಈ ನಡುವೆ ಹೋಟೆಲ್ ಗಳಲ್ಲಿ ಕೇವಲ ಪಾರ್ಸಲ್ ಗೆ ಮಾತ್ರವೇ ಅವಕಾಶ ನೀಡಲಾಗಿತ್ತು.. ಇದೀಗ ಹೋಟೆಲ್‍ನಲ್ಲಿ ನಾಳೆಯಿಂದ ಕೂತು ತಿನ್ನುವ ಅವಕಾಶಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ನೀಡಿದೆ.
ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕ್ಕಿದ್ದ ರಾಜ್ಯ ನಿಧಾನವಾಗಿ ಸಹಜ ಸ್ಥಿತಿಗೆ ಬರುತ್ತಿದೆ. ಲಾಕ್‍ಡೌನ್ ಬಳಿಕ ರಾಜ್ಯ ಸರ್ಕಾರ ಮತ್ತೆ ಅನ್ಲಾಕ್ ಪ್ರಕ್ರಿಯೆ 2.0ಗೆ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಸರ್ಕಾರ ಶೇ.50 ರಷ್ಟು ಮಾತ್ರ ಟೇಬಲ್ ಸರ್ವಿಸ್‍ಗೆ ಅವಕಾಶ ನೀಡಿದೆ. ನಾಳೆಯಿಂದ ಟೇಬಲ್ ಸರ್ವಿಸ್ ನೀಡಲು ಹೋಟಲ್‍ಗಳು ಸಜ್ಜಾಗುತ್ತಿವೆ.
ಇನ್ನೂ ಇತ್ತೀಚೆಗಷ್ಟೇ ಸಿಎಂ ಯಡಿಯೂರಪ್ಪನವರು ಸಿನಿಮಾರಂಗದವರಿಗೆ ಗುಡ್ ನ್ಯೂಸ್ ನೀಡಿದ್ದರು. ರಾಜ್ಯದಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೌದು ಜೂನ್ 21 ಅಂದ್ರೆ ಮುಂಬರುವ ಸೋಮವಾರದಿಂದ ರಾಜ್ಯದಲ್ಲಿ ಸಿನಿಮಾ, ಧಾರಾವಾಹಿ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣ ಮಾಡಬಹುದು ಎಂದು ಘೋಷಣೆ ಮಾಡಿದ್ದರು.. ಜೂನ್ 21 ರಿಂದ ಹೊರಾಂಗಣದಲ್ಲಿ ಶೂಟಿಂಗ್ ಮಾಡಬಹುದು, ಸೂಕ್ತ ಮುಂಜಾಗ್ರತೆ ಕ್ರಮ ಜರುಗಿಸಿಕೊಳ್ಳಬೇಕು ಎಂದು ಸಿಎಂ ಸೂಚನೆ ಕೊಟ್ಟಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








