ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ಲಾಕ್‌ಡೌನ್ ಬೇಕೋ, ಬೇಡ್ವೋ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿಯೇ ನಡೆದಿದೆ.
ಮತ್ತೆ ಲಾಕ್‌ಡೌನ್ ಮಾಡಬೇಕು-ರಾಮಲಿಂಗಾರೆಡ್ಡಿ
ಬೆAಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡಾನ್ ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ. ಮತ್ತೆ ಲಾಕ್‌ಡೌನ್ ಮಾಡದೇ ಇದ್ದರೆ ಕೊರೊನಾ ನಿಯಂತ್ರಣ ಅಸಾಧ್ಯ ಎಂದು ರಾಮಲಿಂಗಾರೆಡ್ಡಿ ಪ್ರತಿಪಾದಿಸಿದ್ದಾರೆ.
ಮತ್ತೆ ಲಾಕ್‌ಡೌನ್ ಇಲ್ಲ: ಡಿಸಿಎಂ ಅಶ್ವತ್ಥ ನಾರಾಯಾಣ
ರಾಜಧಾನಿಯಲ್ಲಿ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ನಾವು ಕೊರೊನಾದೊಂದಿಗೆ ಬದುಕಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನಗರದಲ್ಲಿ ಮತ್ತೆ ಲಾಕ್‌ಡೌನ್ ಮಾಡುವುದಿಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.
ಹೆಚ್ಚು ಸೋಂಕಿತರಿರುವ ಕಡೆ ಲಾಕ್‌ಡೌನ್-ಬಿಬಿಎಂಪಿ
ಬೆAಗಳೂರು ನಗರದಲ್ಲಿ ನಿನ್ನೆ 196 ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿರುವುದು ಬಿಬಿಎಂಪಿಗೆ ತಲೆನೋವಾಗಿ ಪರಿಣಮಿಸಿದೆ. ನಗರದಲ್ಲಿ ದಿನದಿಂದ ದಿನಕ್ಕೆ ಕಂಟೈನ್‌ಮೆAಟ್ ಝೋನ್‌ಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಹೆಚ್ಚು ಕೊರೊನಾ ಪ್ರಕರಣಗಳು ಇರುವ ಪ್ರದೇಶಗಳನ್ನು ಲಾಕ್‌ಡೌನ್ ಮಾಡಲು ಚಿಂತನೆ ನಡೆದಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್ ಸುಳಿವು ನೀಡಿದ್ದಾರೆ.
ಮತ್ತೆ 6 ಮಂದಿ ಪೊಲೀಸರಿಗೆ ಕೊರೊನಾ..!
ನಗರದಲ್ಲಿ ಇಬ್ಬರು ಸಂಚಾರ ಎಸ್‌ಎಐಗಳು ಕೊರೊನಾದಿಂದ ಮೃತಪಟ್ಟಿದ್ದು, ಹಲವು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಲಾಸಿಪಾಳ್ಯ ಠಾಣೆಯೊಂದರಲ್ಲೇ 20ಕ್ಕೂ ಹೆಚ್ಚು ಮಂದಿಗೆ ಕೊರೊನಾ ಬಂದಿದ್ದರೆ, ಇಂದು ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಬೆಟಾಲಿಯನ್‌ನಲ್ಲಿ 6 ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಸೋಂಕಿತರ ಸಂಪರ್ಕದಲ್ಲಿದ್ದ 58 ಕೆಎಸ್‌ಆರ್‌ಪಿ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.