ಫೆಬ್ರವರಿಯಲ್ಲಿ ಹೆಸರೇಳದೆ ರಾಜ್ಯದಲ್ಲಿ ಲಾಕ್ ಡೌನ್..
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಲಂಗು ಲಗಾಮಿಲ್ಲದಂತೆ ಸಿಕ್ಕ ಸಿಕ್ಕವರ ದೇಹ ಹೊಕ್ಕಿ ಆರ್ಭಟಿಸುತ್ತಿದೆ.
ಕಳೆದ 10 ದಿನಗಳಲ್ಲಿ ರಾಜ್ಯದಲ್ಲಿ 69 ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ನಿನ್ನೆ ರಾಜ್ಯದಲ್ಲಿ 14 ಸಾವಿರ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇಖಡಾ 10ರಷ್ಟಾಗಿದೆ.
ಹೀಗಾಗಿ ಸದ್ಯ ರಾಜ್ಯದಲ್ಲಿ ಹಾಫ್ ಲಾಕ್ ಡೌನ್ ಮಾಡಲಾಗಿದ್ದು, ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ.
ಆದ್ರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.
ಮುಖ್ಯವಾಗಿ ಫೆಬ್ರವರಿಯಲ್ಲಿ ರಾಜ್ಯದಲ್ಲಿ ದಿನವೊಂದಕ್ಕೆ 1 ಲಕ್ಷಕ್ಕೂ ಹೆಚ್ಚು ಕೊರೊನಾ ಕೇಸ್ ಗಳು ಬರುವ ಸಾಧ್ಯತೆಗಳವೆ ಎಂದು ಅಂದಾಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆಗಳಿವೆ.
ಆದ್ರೆ ರಾಜ್ಯ ಸರ್ಕಾರ ನೇರವಾಗಿ ಲಾಕ್ ಡೌನ್ ಹೆಸರೇಳದೇ ಜನತಾ ಕರ್ಫ್ಯೂ ಹೆಸರಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ.
ಸಂಪೂರ್ಣ ರಾಜ್ಯದಾದ್ಯಂತ ಅಲ್ಲದಿದ್ದರೂ ಕೊರೊನಾ ಸೋಂಕು ಹೆಚ್ಚಿರುವ ಬೆಂಗಳೂರು, ದಕ್ಷಿಣ ಕನ್ನಡ ಭಾಗದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆಗಳಿವೆ.