ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಏತನ್ಮಧ್ಯೆ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಹೀಗಾಗಿ ಪರೀಕ್ಷೆ ಮಗಿದ ಬಳಿಕವಷ್ಟೇ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂದರೆ ಜುಲೈ 5ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಆಗುವ ಸಾಧ್ಯತೆಗಳಿವೆ.
ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ, ಹಲವು ಸಚಿವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಯುವ ತನಕ ಲಾಕ್ ಡೌನ್ ಎಲ್ಲಿಯೂ ಇಲ್ಲ. ಇಂದು ಕ್ಯಾಬಿನೆಟ್ ನಲ್ಲಿ ಬರೀ ಚರ್ಚೆ ಅಷ್ಟೇ, ನಿರ್ಧಾರ ಇಲ್ಲ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಜುಲೈ 4ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಅಂತ್ಯವಾಗಲಿದೆ. ಹೀಗಾಗಿ ಅಲ್ಲಿಯವರೆಗೆ ಯಾವುದೇ ನಿರ್ಣಯ ಇಲ್ಲ. ಜುಲೈ 5ರ ತನಕ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡದಿರಲು ಯಡಿಯೂರಪ್ಪ ತಿರ್ಮಾನಿಸಿದ್ದಾರೆ.