Lockdown ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ : ಸಿದ್ದರಾಮಯ್ಯ
ಕೊಪ್ಪಳ : ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ಕೊರೊನಾ ಸ್ಫೋಟ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಬಿಜೆಪಿ ಸರ್ಕಾರದ ತಪ್ಪಿನಿಂದಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದೆ.
ಸರ್ಕಾರ ಕೊರೊನಾಗೆ ಕಡಿವಾಣ ಹಾಕುವುದನ್ನ ಬಿಟ್ಟು ದುಡ್ಡು ಹೊಡೆಯೋದ್ರಲ್ಲಿ ಕಾಲಹರಣ ಮಾಡುತ್ತಿದೆ.
ನಿನ್ನೆ ಒಂದೇ ದಿನ 10 ಸಾವಿರಕ್ಕೂ ಅಧಿಕ ಕೇಸ್ ಬಂದಿವೆ. ಸರ್ಕಾರ ಬಿಗಿ ಕ್ರಮ ಕೈಗೊಳ್ಳದಿದ್ದಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ ಎಂದು ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ಲಾಕ್ ಡೌನ್ ಬೇಕಾ..? ಎಂಬ ಪ್ರಶ್ನೆಗೆ ಉತ್ತರಿಸಿ, ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ ಎಂದು ಅಭಿಪ್ರಾಯಟ್ಟಿದ್ದಾರೆ.










