ಕೊರೊನಾ ಭೀತಿಯಿಂದ ಮಾಡಿದ ಲಾಕ್ ಡೌನ್ 21 ದಿನಗಳ ಕಾಲ ಮತ್ತೆ ಮುಂದುವರೆಸುತ್ತಾರೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಇದು ಆಧಾರ ರಹಿತವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೊರೊನಾ ಹರಡುವಿಕೆ ತಡೆಗಟ್ಟಲು ದೇಶವನ್ನು 21 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿದೆ. ಆದರೆ ಕೆಲ ಮಾಧ್ಯಮಗಳಲ್ಲಿ ಇನ್ನೂ ಮೂರು ತಿಂಗಳ ಕಾಲ ಲಾಕ್ ಡೌನ್ ಮುಂದುವರೆಯುವುದು, ಇನ್ನೂ ಒಂದು ತಿಂಗಳ ಕಾಲ ಮುಂದುವರೆಯುವುದು ಎಂದು ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ, ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ. ಲಾಕ್ ಡೌನ್ ಮುಂದುವರೆಯುತ್ತೆ ಎಂಬ ಸುದ್ದಿಗಳು ಸುಳ್ಳು. ಈ ವರದಿಗಳು ಆಧಾರ ರಹಿತ ಎಂದು ಹೇಳಿದ್ದಾರೆ.