ದ.ಕ ಜಿಲ್ಲೆಯಲ್ಲಿ ಜೂನ್ 20 ರವರೆಗೆ ಲಾಕ್ ಡೌನ್
ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 20 ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸಿಎಂ ಜೊತೆಗಿನ ವಿಡಿಯೋ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತರಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 20 ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ.
ಇದಕ್ಕೆ ಸಿಎಂ ಯಡಿಯೂರಪ್ಪ ಅವರು ಕೂಡಾ ಒಪ್ಪಿದ್ದಾರೆ. ಕೈಗಾರಿಕೆ ಹಾಗೂ ಇನ್ನಿತರ ಸಣ್ಣ ವ್ಯಾಪಾರಸ್ಥರಿಗೆ ಸಡಿಲಿಕೆ ನೀಡುವ ಬಗ್ಗೆ ನಾಳೆ ಸಭೆ ನಡೆಸಿ ಚರ್ಚಿಸಲಾಗುತ್ತದೆ ಎಂದು ಹೇಳಿದರು.
ಇನ್ನು ಬೆಳ್ತಂಗಡಿ ಹಾಗೂ ಸುಳ್ಯದಲ್ಲಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿವೆ. ಹೀಗಾಗಿ ಪ್ರತಿ ಕಡೆಯೂ ವೈದ್ಯರ ನಡೆ ಹಳ್ಳಿಯ ಕಡೆ ಎಂದು ಮನೆಮನೆಗೆ ತೆರಳಿ ಸೋಂಕು ತಪಾಸಣೆ ನಡೆಸಲಾಗುತ್ತಿದೆ.
ಒಂದು ಹಂತದಲ್ಲಿ ಸೋಂಕಿನ ಪ್ರಮಾಣ ಸಾಕಷ್ಟು ಕಡಿಮೆಯಾಗಿದ್ದರೂ, ಇನ್ನೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.