ಅರ್ಧ ಕರುನಾಡು ಅನ್ ಲಾಕ್ : ಯಾವುದಕ್ಕೆಲ್ಲ ವಿನಾಯಿತಿ..?
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಆಗಿದೆ. ಆದ್ರೆ ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ, ನೈಟ್ ಕಫ್ರ್ಯೂ ಮುಂದುವರೆಯಲಿದೆ. ಸಾರ್ವಜನಿಕ ಸಾರಿಗೆ ಸೇವೆಗೆ ನಿಬರ್ಂಧವೂ ಮುಂದುವರೆಯಲಿದೆ.
ಎಲ್ಲೆಲ್ಲಿ ಲಾಕ್ ಡೌನ್ ವಿಸ್ತರಣೆ..?
ಸರ್ಕಾರ ಕೊರೊನಾ ಕಡಿಮೆ ಇರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಂದ ವಿನಾಯಿತಿ ನೀಡಿದೆ. ಆದ್ರೆ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿರುವ ಕಾರಣ ಇನ್ನೂ ಒಂದು ವಾರ ಕಾಲ ಲಾಕ್ಡೌನ್ನ ಕಠಿಣ ನಿಯಮಗಳು ಜಾರಿಯಲ್ಲಿ ಇರಲಿವೆ.
ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ವಿನಾಯಿತಿ ನೀಡಲಾಗಿದೆ. ಜಿಲ್ಲೆಗಳಲ್ಲಿ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕಫ್ರ್ಯೂ ಇರಲಿದೆ. ಜೂನ್ 18ರ ರಾತ್ರಿ 7ರಿಂದ ಜೂನ್ 21ರ ಬೆಳಿಗ್ಗೆ 5ರವರೆಗೆ ವಾರಾಂತ್ಯದ ಕಫ್ರ್ಯೂ ಇರಲಿದೆ.
ಯಾವುದಕ್ಕೆಲ್ಲ ವಿನಾಯಿತಿ:
ಬೆಳಿಗ್ಗೆ 6ರಿಂದ ಮಧ್ಯಾಹ್ನ 2ರ ವರೆಗೂ ಅಗತ್ಯ ವಸ್ತು ಖರೀದಿಗೆ ಅವಕಾಶ
ಬೀದಿ ಬದಿ ವ್ಯಾಪಾರಿಗಳಿಗೂ ಈ ಅವಧಿ ಅನ್ವಯ
ಎಲ್ಲ ಕಾರ್ಖಾನೆಯಲ್ಲಿ ಶೇ. 50ರಷ್ಟು ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯ ನಿರ್ವಹಣೆ
ಗಾಮೆರ್ಂಟ್ಸ್ ಶೇ. 30 ಸಿಬ್ಬಂದಿಗೆ ಅವಕಾಶ
ಉದ್ಯಾನಗಳಲ್ಲಿ ಬೆಳಿಗ್ಗೆ 5ರಿಂದ 10 ಗಂಟೆಯವರೆಗೆ ವಾಯುವಿಹಾರಕ್ಕೆ ಅವಕಾಶ
ಆಟೋ, ಟ್ಯಾಕ್ಸಿ ಇಬ್ಬರು ಪ್ರಯಾಣಿಕರಿಗೆ ಅವಕಾಶ
ಮದ್ಯ ಮಾರಾಟದ ಅವಧಿಯೂ ಮಧ್ಯಾಹ್ನ 2ರ ವರೆಗೆ ವಿಸ್ತರಣೆ
ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ
ನಿರ್ಮಾಣ ಸಾಮಗ್ರಿಗಳ ಅಂಗಡಿಗೂ ಅವಕಾಶ









