ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಲಾಕ್ಡೌನ್ ನಿಯಮ ಜಾರಿಯಾಗಬೇಕು : ಸಚಿವ ಬಿ.ಎ.ಬಸವರಾಜ

1 min read

ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಲಾಕ್ಡೌನ್ ನಿಯಮ ಜಾರಿಯಾಗಬೇಕು : ಸಚಿವ ಬಿ.ಎ.ಬಸವರಾಜ

ಬೆಂಗಳೂರು : ಸರ್ಕಾರ ಘೋಷಣೆಮಾಡಿರುವ ಲಾಕ್‍ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಜಿಲ್ಲೆಯಾದ್ಯಂತ ಪಾಲಿಸುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಗೆ ಹೊರಭಾಗದಿಂದ ಬಂದವರಿಗೆ ಕೋವಿಡ್-19 ಲಕ್ಷಣವಿದ್ದಲ್ಲಿ, ತಕ್ಷಣವೇ ಪರೀಕ್ಷೆ ಮಾಡಿ ಅವರನ್ನು ಫಲಿತಾಂಶ ಬರುವವರೆಗೆ ಹೋಮ್ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳಬೇಕು. ಇದು ಆರೋಗ್ಯ ಇಲಾಖೆಯ ಪ್ರಮುಖ ಜವಾಬ್ದಾರಿ ಎಂದು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಬೆಂಗಳೂರಿನ ವಿಕಾಸ ಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ದಾವಣಗೆರೆ ಜಿಲ್ಲಾಡಳಿತ ದೊಂದಿಗೆ ನಡೆಸಿದ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸಚಿವರು ಕೋರೋನಾ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಕೋವಿಡ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಶಿಫ್ಟ್ ಪ್ರಕಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳಾಗಿ ನೇಮಿಸಿ, ಅವರಿಂದ ಪ್ರತನಿತ್ಯ ವರದಿ ಪಡೆಯಬೇಕು. ಸರ್ಕಾರದಿಂದ ಆದೇಶವಾಗಿರುವ ಬಿಗಿ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೆಲವೊಂದಕ್ಕೆ ಸರ್ಕಾರ ಪರವಾನಿಗೆ ನೀಡಿದ್ದು, ಅಂತಹ ಕಾರ್ಯಗಳಿಗೆ ತೊಂದರೆಯಾಗದಂತೆಯೂ ನೋಡಿಕೊಳ್ಳಬೇಕು.

Lockdown

ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹ ರಕ್ಷಕದಳದ ಸಿಬ್ಬಂದಿಗಳ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇವರನ್ನು ಬಳಸಿಕೊಂಡು ಕಠಿಣ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳಬೇಕು.

ಬಯಲು ಪ್ರದೇಶದಲ್ಲಿ ಮಾರುಕಟ್ಟೆ ಸ್ಥಳಾವಕಾಶ ಕಲ್ಪಿಸಿ 

ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಜನಜಂಗುಳಿಯಾಗುವ ಸಾಧ್ಯತೆ ಇರತ್ತೆ. ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿ, ಎಲ್ಲಿಯೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಒಂದೇ ಕಡೆ ಮಾರುಕಟ್ಟೆ ಇದ್ದರೆ ಜನರು ಅನಿವಾರ್ಯವಾಗಿ ಸೇರಬೇಕಾಗುತ್ತದೆ. ಹಾಗಾಗಿ ದಾವಣಗೆರೆಯ ಹೂರವಲಯದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ಒಂದು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್‍ಗಾಗಿ ಮೀಸಲಿರಿಸಿ. ಯಾವುದೇ ಆಸ್ಪತೆ ಅಥವಾ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದಲ್ಲಿ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಿ ಎಂದು ಹೇಳಿದರು.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd