ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಎಸ್.ಟಿ.ಸೋಮಶೇಖರ್ ಹೇಳಿದ್ದೇನು..?
ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಗುರುವಾರ ಅಥವಾ ಶುಕ್ರವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ಚರ್ಚೆ ನಡೆಸಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ, ಲಾಕ್ ಡೌನ್ ವಿಸ್ತರಣೆ ಮಾಡಬೇಕು ಅನ್ನೋ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ವಿಸ್ತರಣೆ ಮಾಡಬೇಕು ಅನ್ನೋ ಅಭಿಪ್ರಾಯ ವ್ಯಕ್ತವಾಗಿದೆ. ಇಂದು ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತಾರೆ.
ತಜ್ಞರ ಇನ್ನೊಂದು ವರದಿ ಬಳಿಕ ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ಮಾಡ್ತಾರೆ. ಪ್ಯಾಕೇಜ್ ವಿಸ್ತರಣೆ ಬಗ್ಗೆಯೂ ಸಿಎಂ ನಿರ್ಧಾರ ಮಾಡ್ತಾರೆ ಎಂದರು.
ಇನ್ನು ಕೆಂಗೇರಿ ಉಪನಗರದಲ್ಲಿರೋ ಅಂಬೇಡ್ಕರ್ ಭವನದಲ್ಲಿ ಟ್ರಯೆಜ್ ಉದ್ಘಾಟನೆ ಮಾಡಿದ್ದೇನೆ. ಕೋವಿಡ್ ರೋಗಿಯ ಪರಿಸ್ಥಿತಿ ಆಧಾರದ ಮೇಲೆ ನಿರ್ಧಾರ ಮಾಡಲಿದ್ದಾರೆ. 24 ಗಂಟೆ ವೈದ್ಯರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಿದರು.