ಜುಲೈ 24ರ ಬಳಿಕವೂ ಧಾರವಾಡದಲಿ ಲಾಕ್ ಡೌನ್ ವಿಸ್ತರಣೆಯಾಗಬೇಕೆಂಬ ಮಾತುಗಳು ವ್ಯಾಪಕವಾಗಿ ಕೇಳಿಬರ್ತಿದೆ. ಇದೀಗ ಈ ವಿಚಾರವಾಗಿ ಸಚಿವ ಜಗದೀಶ್ ಶೆಟ್ಟರ್ ಅವರು ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟದಲ್ಲಿ ಸಿಎಂ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಆದ್ರೆ ಲಾಕ್ ಡೌನ್ ವಿಸ್ತರಣೆಯೇ ಪರಿಹಾರವಲ್ಲ. ಹೀಗಾಗಿ 25 ರ ನಂತರ ಲಾಕ್ ಡೌನ್ ವಿಸ್ತರಣೆ ಬಹುತೇಕ ಡೌಟ್. ಆದ್ರೂ ಡಿಸಿ, ವೈದ್ಯರು, ತಜ್ಞರ ಜೊತೆಗೆ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ದಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿರುವ ಸಚಿವರು ಕೊರೊನಾ ನಿಯಂತ್ರಣ ವಿಚಾರದಲ್ಲಿ ಸಚಿವರ ಮಧ್ಯೆ ಸಮನ್ವಯತೆ ಇಲ್ಲ ಎನ್ನುವುದು ಸುಳ್ಳು. ಸರ್ಕಾರ ಸೇರಿದಂತೆ ಎಲ್ಲಾ ಸಚಿವರು ಪ್ರಮಾಣಿಕವಾಗಿ ಒಗ್ಗೂಡಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೋವಿಡ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ. ವಿಪಕ್ಷಗಳು ಏನೋ ಆರೋಪ ಮಾಡ್ಬೇಕು ಅಂತ ಮಾಡಬಾರದು. ರಚನಾತ್ಮಕವಾಗಿ ಟೀಕೆ ಮಾಡಬೇಕು. ವ್ಯರ್ಥ ಆರೋಪ ಸರಿಯಲ್ಲ ಎಂದು ವಿಪಕ್ಷರ ಆರೋಪಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...








