ಬೆಳಗಾವಿ: ದೇಶ ಸೇರಿದಂತೆ ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ.
ಕರ್ನಾಟಕದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ದೇಶದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ದಾಖಲೆ ಇಲ್ಲದೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ 2 ಲಕ್ಷ ರೂ. ಹಣವನ್ನು ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ್ದಾರೆ.
ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಚೆಕ್ಪೋಸ್ಟ್ನಲ್ಲಿ ಈ ಘಟನೆ ನಡೆದಿದ್ದು, 1 ಆಲ್ಟೋ ಕಾರು ಸೇರಿದಂತೆ ನಾಲ್ವರು ಆರೋಪಿಗಳನ್ನು ಮೂಡಲಗಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 64 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.