Lok Sabha Elections 2024 : ಕಾಂಗ್ರೆಸ್ ನಿಂದ ದೂರ ಉಳಿಯಲು ನಿರ್ಧರಿಸಿದ TMC….
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಕಾಂಗ್ರೆಸ್ ಕರೆ ನೀಡುತ್ತಿರುವಾಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಹ್ವಾನವನ್ನ ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಮಾನ ಅಂತರ ಕಾಯ್ದುಕೊಳ್ಳಲು ಟಿಎಂಸಿ ನಿರ್ಧರಿಸಿದೆ. ಅಲ್ಲದೇ ಆ ಎರಡು ಪಕ್ಷಗಳಿಂದ ದೂರ ಉಳಿದಿರುವ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.
ಈಶಾನ್ಯ ರಾಜ್ಯಗಳಲ್ಲಿ ಇತ್ತೀಚಿನ ಚುನಾವಣೆ ಫಲಿತಾಂಶ TMC ಯನ್ನ ನಿರಾಸೆಗೊಳಿಸಿದೆ. ಇದಲ್ಲದೆ, ಪಶ್ಚಿಮ ಬಂಗಾಳದ ಸಾಗರಡಿಗಿ ಕ್ಷೇತ್ರಕ್ಕೆ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೈರನ್ ಬಿಸ್ವಾಸ್ ಗೆದ್ದಿದ್ದಾರೆ. ಆ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪ್ರಬಲವಾಗಿದ್ದ ಟಿಎಂಸಿಯನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಅದೇ ದಿನ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು 2024 ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಇತ್ತೀಚೆಗೆ ಲೋಕಸಭೆಯಲ್ಲಿ ಟಿಎಂಸಿ ಸಂಸದೀಯ ನಾಯಕ ಸುದೀಪ್ ಬಂಡೋಪಾಧ್ಯಾಯ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸಮಾನ ಅಂತರ ಕಾಯ್ದುಕೊಂಡು ವಿರೋಧ ಪಕ್ಷಗಳೊಂದಿಗೆ ಮುನ್ನಡೆಯುತ್ತೇನೆ ಎಂದು ಹೇಳಿದರು. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಇದೇ ತಂತ್ರವನ್ನು ಜಾರಿಗೆ ತರುತ್ತೇವೆ ಎಂದರು. ಈಗಾಗಲೇ ಬಿಆರ್ ಎಸ್ , ಆಮ್ ಆದ್ಮಿ ಸೇರಿದಂತೆ ಹಲವು ಪಕ್ಷಗಳೊಂದಿಗೆ ಮಾತನಾಡಿದ್ದೇನೆ ಎಂದರು. ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಕರ್ನಾಟಕ ರಾಜ್ಯಗಳ ಚುನಾವಣೆಯ ನಂತರ ಆಯಾ ಪಕ್ಷಗಳ ಬಗ್ಗೆ ಸಂಪೂರ್ಣ ಸ್ಪಷ್ಟತೆ ದೊರೆಯಲಿದೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮುನ್ನಡೆಯಬೇಕು ಎಂಬ ಬಗ್ಗೆ ಈ ವರ್ಷಾಂತ್ಯದೊಳಗೆ ಆಯಾ ಪಕ್ಷಗಳು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದರು. ಕಳೆದ ಒಂಬತ್ತು ವರ್ಷಗಳಿಂದ ಬಿಜೆಪಿ ವಿರುದ್ಧ ಸರಿಯಾಗಿ ಹೋರಾಟ ನಡೆಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎಂದರು.
Lok Sabha Elections 2024 : TMC has decided to stay away from Congress….