ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಗಲಿರುಳು ಮತಬೇಟೆ ನಡೆಸಿದ್ದಾರೆ.
ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಭಾಷಣದೊಂದಿಗೆ ಅವರು ಪ್ರಚಾರ ಕಾರ್ಯಕ್ಕೆ ಅಂತ್ಯ ಹಾಡಿದರು. ಸದ್ಯ ಪ್ರಧಾನಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ (Vivekananda Rock Memorial) ಜೂನ್ 1 ರವರೆಗೆ ಅಂದರೆ ಎರಡು ದಿನಗಳ ಕಾಲ (45 ಗಂಟೆಗಳ) ಧ್ಯಾನ ಮಾಡಲಿದ್ದಾರೆ.
ಚುನಾವಣೆ ಘೋಷಣೆಯಾದಾಗಿನಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ ಅವರು ಬರೋಬ್ಬರಿ 206 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳಲ್ಲಿ ಭಾಗವಹಿಸಿದ್ದಾರೆ. ಒಟ್ಟು 80 ಸಂದರ್ಶನಗಳನ್ನು ನೀಡಿದ್ದಾರೆ. ಮತದಾನ ಆರಂಭವಾದಾಗಿನಿಂದ ಸರಾಸರಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಸಂದರ್ಶನಗಳನ್ನು ನೀಡಿದ್ದಾರೆ.
2019 ರಲ್ಲಿ ಪ್ರಧಾನಿ ಮೋದಿ 145 ಸಮಾವೇಶಗಳಲ್ಲಿ ಭಾಗವಹಿಸಿದ್ದರು. ಆದರೆ, ಈ ಬಾರಿ ಹೆಚ್ಚು ಪ್ರಚಾರ ಹಾಗೂ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಕಳೆದ ಬಾರಿ ಪ್ರಚಾರದ ಅವಧಿ 68 ದಿನ ಇದ್ದಿದ್ದರೆ, ಈ ಬಾರಿ 76 ದಿನ ಇದ್ದವು. ಈ ಬಾರಿ ಹ್ಯಾಟ್ರಿಕ್ ಸಾಧನೆ ಮಾಡಲು ನರೇಂದ್ರ ಮೋದಿ ಮುಂದಾಗಿದ್ದಾರೆ. ಜೂನ್ 4ರಂದು ಫಲಿತಾಂಶ ಹೊರ ಬೀಳಲಿದ್ದು, ಮತದಾನ ಭವಿಷ್ಯ ಬಹಿರಂಗವಾಗಲಿದೆ.