Lok Sabha polls-2024: ಚುನಾವಣೆ ನಂತರ ಟೆಲಿಸ್ಕೋಪ್ ಮೂಲಕ ನೋಡಿದರೂ ಕಾಂಗ್ರೆಸ್ ಕಾಣುವುದಿಲ್ಲ…
2024 ರ ಲೋಕಸಭೆ ಚುನಾವಣೆಯ ನಂತರ ಟೆಲಿಸ್ಕೋಪ್ ಇಟ್ಟು ಕಾಂಗ್ರೆಸ್ ಪಕ್ಷ ಕಾಣುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾಗಾಲ್ಯಾಂಡ್ ವಿಧಾನಸಭಾ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನಾಯಕರಾದಾಗಿನಿಂದ ಆ ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ನಾಗಾಲ್ಯಾಂಡ್ ನಲ್ಲಿ ಎನ್‌ಡಿಪಿಪಿ-ಬಿಜೆಪಿ ಮತ್ತೆ ಸರ್ಕಾರ ರಚಿಸಲಿದ್ದು, ಜನರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ನಾಗಾಲ್ಯಾಂಡ್ ನಲ್ಲಿ ಶಾಂತಿ ಸ್ಥಾಪನೆಗೆ ಶ್ರಮಿಸುವುದಾಗಿ ಹೇಳಿದರು. ಶಾಂತಿ ಸಂಧಾನವನ್ನು ಯಶಸ್ವಿಯಾಗಿ ನಡೆಸುವುದು ತಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
60 ಸ್ಥಾನಗಳ ನಾಗಾಲ್ಯಾಂಡ್ ವಿಧಾನಸಭೆಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಅಲ್ಲದೇ ಅದೇ ದಿನ ಮೇಘಾಲಯದಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 16 ರಂದು ತ್ರಿಪುರಾದಲ್ಲಿ ಚುನಾವಣೆ ನಡೆದಿದೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಮಾರ್ಚ್ 2 ರಂದು ಪ್ರಕಟವಾಗಲಿದೆ.
Lok Sabha polls-2024: After 2024 Lok Sabha Polls Congress Wont Be Visible Even Through Telescope – Amit Shah