ಬೆಂಗಳೂರು: BBMP ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಲ್ಲಿಯ ದೇವಯ್ಯ ಪಾರ್ಕ್ ಹತ್ತಿರ ಇರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವಯ್ಯಾಲಿಕಾವಲ್ ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸದ ಮೇಲೆ ದಾಳಿ ನಡೆಸಿ, ಜಾಲಾಡುತ್ತಿದ್ದಾರೆ.
ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಇವರ ಮೇಲಿತ್ತು. ಹೀಗಾಗಿ ಲೋಕಾಯುಕ್ತರು ಇಂದು ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಎಂಟು ತಂಡಗಳು ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿವೆ.








