ಬೆಂಗಳೂರು: ಲೋಕಾಯುಕ್ತ ಅಧಿಕಾರಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 13 ಅಧಿಕಾರಿಗಳಿಗೆ ಸೇರಿದ 63 ಪ್ರದೇಶಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 3 ಕಡೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿ ದಾಳಿ ನಡೆಸಲಾಗಿದೆ. ಸುಮಾರು 200ಕ್ಕೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.