ಬೆಂಗಳೂರು: ಸಾರ್ವಜನಿಕರಿಂದ ಆರೋಪ ಕೇಶಳಿ ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳ ತಂಡ ಗುರುವಾರ ಬೆಂಗಳೂರಿನಾದ್ಯಂತ 45 ಕಡೆ ಏಕಕಾಲಕ್ಕೆ ದಾಳಿ ನಡೆಸಿದೆ.
ಲೋಕಾಯುಕ್ತ ಮುಖ್ಯನ್ಯಾಯಮೂರ್ತಿ ಬಿ.ಎಸ್ ಪಾಟೀಲ್ (BS Patil), ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಬೆಸ್ಕಾಂ ಹಾಗೂ ಜಲಮಂಡಳಿ ಅಧಿಕಾರಿಗಳ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಕಡತ ಪರಿಶೀಲಿಸಿದ್ದಾರೆ.
83 ಬೆಸ್ಕಾಂ ಅಧಿಕಾರಿಗಳು ಹಾಗೂ 63 BWSSB ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
45 ತಂಡಗಳು ಇಂದು ಏಕಕಾಲಕ್ಕೆ ದಾಳಿ ನಡೆಸಿವೆ. 63 ಕಚೇರಿಗಳ ಮೇಲೆ ಕೇಸ್ ದಾಖಾಲಾಗಿದೆ. ಇವತ್ತು 45 ಕಚೇರಿಗಳಿಗೆ ಭೇಟಿ ನೀಡಲಾಗಿದೆ.








