ಬಳ್ಳಾರ: ಲಂಚ ಪಡೆಯುತ್ತಿದ್ದ ವೇಳೆಯೇ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಎರಡು ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿರುವಂತಹ ಘಟನೆ ನಗರದ ವಿಮ್ಸ್ ಆಸ್ಪತ್ರೆಯ ಪಕ್ಕದಲ್ಲಿರುವ ಸಣ್ಣ ನೀರಾವರಿ ಕಚೇರಿಯಲ್ಲಿ ನಡೆದಿದೆ. ಕಾಮಗಾರಿ ಬಿಲ್ 30 ಲಕ್ಷ ರೂ. ಪಾವತಿಸುವುದಕ್ಕಾಗಿ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ನಾಗರಾಜ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದಿದ್ದಾನೆ.
ಈ ಅಧಿಕಾರಿ ಗುತ್ತೆಗೆದಾರ ರಾಮಕೃಷ್ಣ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ದರಾಜ ನೇತೃತ್ವದಲ್ಲಿ ದಾಳಿ ನಡೆದಿದೆ. 30 ಲಕ್ಷ ರೂ. ಕಾಮಗಾರಿ ಬಾಕಿ ಬಿಲ್ ಪಾವತಿ ಮಾಡಲು ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ. ಎರಡು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಸದ್ಯ ಅಧಿಕಾರಿಗಳು ನಾಗರಾಜ್ ಮನೆ ಪರಿಶೀಲನೆ ನಡೆಸಿದ್ದಾರೆ.








