(Lokesh Talikatte Pressmeet)
ಬೆಂಗಳೂರು : ಕೋವಿಡ್ 19 ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರವು, ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಕಡೆಗಣಿಸುತ್ತಿದೆ ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ (Lokesh Talikatte) ಆರೋಪಿಸಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು ಸರ್ಕಾರದ ಧೋರಣೆಯಿಂದ ಸಾವಿರಾರು ಖಾಸಗಿ ಶಾಲೆಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಂಡು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ.
ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ವಿದ್ಯಾಗಮ ಹೆಸರಿನಲ್ಲಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿರುವ ಅವರು ಸರ್ಕಾರದ ನಿರ್ಧಾರಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ದಯನೀಯ ಸ್ಥಿತಿಗೆ ಬಂದಿದೆ.
ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೈತಿಕ ಬೆಂಬಲ ನೀಡುವುದಕ್ಕಾಗಿಯೇ ರಾಜ್ಯ ಮಟ್ಟದ ನೊಂದಾಯಿತ ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳ ಒಕ್ಕೂಟವನ್ನು ಸ್ಥಾಪನೆ ಮಾಡಲಾಗಿದೆ.
ಶಿಕ್ಷಕರ ಸರಣಿ ಸಾವಿನ `ಕೊರೊನಾಗಮನ’ವಾಯ್ತಾ ವಿದ್ಯಾಗಮ ಯೋಜನೆ..!
ರೂಪ್ಸ್ ಕರ್ನಾಟಕದ ಮೂಲದ ಖಾಸಗಿ ಶಾಲೆಗಳನ್ನು ಸಶಕ್ತ, ಸದೃಢ ಮತ್ತು ಸಂಘಟನಾತ್ಮಕವಾಗಿ ಬೆಳೆಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ರು.
ಇನ್ನು, ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಶಾಲಾ ಪ್ರಾರಂಭದ ಬಗ್ಗೆ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿಲ್ಲ.
ಅಲ್ಲದೆ 2020-2021ನೇ ಸಾಲಿನ ವಾರ್ಷಿಕ ಪಠ್ಯಕ್ರಮ ಮತ್ತು ವೇಳಾಪಟ್ಟಿಯನ್ನು ನಿಗದಿಪಡಿಸಿಲ್ಲ.
ಶುಲ್ಕ ಪಡೆಯುವ ಬಗ್ಗೆಯೂ ಸರ್ಕಾರ ಸ್ಪಷ್ಟತೆ ನೀಡುತ್ತಿಲ್ಲ. ಆದ್ರೆ ಪಠ್ಯಪುಸ್ತಕಗಳ ಖರೀದಿಗೆ ಖಾಸಗಿ ಶಾಲೆಗಳ ಮೇಲೆ ಒತ್ತಡ ಹೇರುತ್ತಿದೆ.
ಜೊತೆಗೆ ದಾಖಲಾತಿ ಆರಂಭವಾಗದಿದ್ರೂ ಪೂರ್ಣ ವೇತನ ನೀಡಲು ನಿರ್ದೇಶನ ನೀಡಿದೆ ಎಂದು ಲೋಕೇಶ್ ತಾಳಿಕಟ್ಟೆ ಅವರು ಇದೇ ಸಂದರ್ಭದಲ್ಲಿ ಆರೋಪಿಸಿದ್ರು.
ಮತ್ತೊಂದೆಡೆ, ರಾಜ್ಯ ಸರ್ಕಾರದಿಂದ 2018-2019, 2019-2020ನೇ ಸಾಲಿನ ಆರ್ ಟಿಇ ಬಾಕಿ ಶುಲ್ಕವನ್ನು ಮಂಜೂರು ಮಾಡಿಲ್ಲ.
ವಿದ್ಯಾಗಮ ಯೋಜನೆ ಅಡಿಯಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಭೇದ ಭಾವ ಉಂಟು ಮಾಡುಲಾಗುತ್ತಿದೆ.
ವಿದ್ಯಾಗಮ ಹೆಸರಿನಲ್ಲಿ ವಾಮ ಮಾರ್ಗ ಅನುಸರಿಸಿ ವರ್ಗಾವಣೆ ಪ್ರಮಾಣ ಪತ್ರಗಳನ್ನು ಪಡೆಯಲಾಗುತ್ತಿದೆ.
ರಾಜ್ಯದಿಂದ ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಅನ್ಯಾಯವಾಗುತ್ತಿದೆ.
ಈ ಎಲ್ಲಾ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಬೇಕು ಎಂದು ಆಗ್ರಹಿಸಿದ್ರು.
ಸುದ್ದಿಗೋಷ್ಠಿಯಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಕಾರ್ಯದರ್ಶಿ ಶಶಿ ಕುಮಾರ್ ದಿಂಡೂರು, ಸಂಘಟಕರಾದ ಜೈರಂಗನಾಥ್, ನಿರ್ದೇಶಕರಾದ ನಾಗರಾಜ್ ಹಾಗೂ ಕೋಶಾಧಿಕಾರಿ ಶಿವ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel