ಬೆಂಗಳೂರು: ರೂಪಾಂತರಗೊಂಡಿರುವ ಲಂಡನ್ ಕೊರೊನಾ ವೈರಸ್‍ಗೆ ರಾಜ್ಯದಲ್ಲೂ ಆತಂಕ ಶುರುವಾಗಿದ್ದು, ಸೋಂಕು ಹರಡದಂತೆ ತಡೆಯಲು ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಜಾರಿಯಾಗುತ್ತಾ ಎಂಬ ಶಂಕೆ ವ್ಯಕ್ತವಾಗಿದೆ.
ಕೆಲವೇ ಕ್ಷಣಗಳಲ್ಲಿ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದ್ದು, ಭಾರಿ ಮಹತ್ವ ಪಡೆದುಕೊಂಡಿದೆ.

ಮಂಗಳವಾರ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಲಂಡನ್ ಕೊರೊನಾ ವೈರಸ್ ತಡೆಗೆ ನೈಟ್ ಕಪ್ರ್ಯೂ ಜಾರಿ ಮಾಡಿದರೆ ಪ್ರಯೋಜನವಿಲ್ಲ. ಒಂದು ವೇಳೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾದರೆ ಲಾಕ್‍ಡೌನ್ ಮಾಡುವುದೇ ಒಳ್ಳೆಯದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ವ್ಯಕ್ತವಾದ ಸಲಹೆಗಳ ವರದಿಯನ್ನು ಆರೋಗ್ಯ ಸಚಿವ ಸುಧಾಕರ್‍ಗೆ ಇಂದು ಸಲ್ಲಿಕೆಯಾಗಲಿದೆ.
ಈ ವರದಿಯ ಸಾಧಕ-ಬಾಧಕಗಳ ಬಗ್ಗೆ ಆರೋಗ್ಯ ಸಚಿವ ಸುಧಾಕರ್, ಕೆಲವೇ ಕ್ಷಣಗಳಲ್ಲಿ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ನಿನ್ನೆಯೇ ನೈಟ್ ಕಫ್ರ್ಯೂ ಜಾರಿ ಮಾಡುವ ಬಗ್ಗೆ ಸುಧಾಕರ್ ಒಲವು ವ್ಯಕ್ತಪಡಿಸಿದ್ದರು. ಆದರೆ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಲಾಕ್‍ಡೌನ್ ಅಗತ್ಯತೆಯ ಬಗ್ಗೆ ಪ್ರಸ್ತಾಪಿಸಿದೆ.
ಹಿಂದೆ ಆಗಿರುವ ತಪ್ಪುಗಳು ಮರುಕಳಿಸಬಾರದು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ತಡವಾಗಿ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಸೋಂಕು ನಿಯಂತ್ರಣಕ್ಕೆ ಬಾರದೆ ಕೈಚೆಲ್ಲಬೇಕಾಯಿತು. ಹೀಗಾಗಿ ಈಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಸೂಕ್ತ ಎಂದು ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಸುಧಾಕರ್ ನೇತೃತ್ವದಲ್ಲಿ ನಡೆಯುವ ಸಭೆ ಬಗ್ಗೆ ಭಾರಿ ಕುತೂಹಲ ಕೆರಳಿಸಿದೆ.
ಮುಖ್ಯಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸ್
ಇಂಗ್ಲೆಂಡ್‍ನಲ್ಲಿ ಹೊಸ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು, ಲಂಡನ್ ಸೇರಿದಂತೆ ವಿದೇಶಗಳಿಂದ ಸಾಕಷ್ಟು ಜನರು ರಾಜ್ಯಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಹಿರಿಯ ಅಧಿಕಾರಿ ಜತೆ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಸಭೆ ಕರೆದಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಟಿ.ಎಂ ವಿಜಯ್ ಭಾಸ್ಕರ್ ಮಧ್ಯಾಹ್ನ 2 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳು, ಚಿಕಿತ್ಸೆಗೆ ಆಸ್ಪತ್ರೆಗಳನ್ನು ಸಜ್ಜುಗೊಳಿಸುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ನಿರಾಳರಾದ ಕುಂದಾನಗರಿ ಜನತೆ..!
ಕುಂದಾನಗರಿ ಬೆಳಗಾವಿಯ ಜನತೆಯ ಆತಂಕಕ್ಕೆ ಕಾರಣವಾಗಿದ್ದ ಲಂಡನ್‍ನಿಂದ ಬಂದಿದ್ದ ಮಹಿಳೆಗೆ ಕೊರೊನಾ ನೆಗೆಟಿವ್ ಬಂದಿದೆ. ಹೀಗಾಗಿ ಬೆಳಗಾವಿಯ ಜನತೆ ಸದ್ಯಕ್ಕೆ ನಿರಾಳರಾಗಿದ್ದಾರೆ. ತಡರಾತ್ರಿ ಬಂದ ಟೆಸ್ಟ್ ವರದಿಯಲ್ಲಿ ಮಹಿಳೆಗೆ ಕೊರೊನಾ ನೆಗೆಟಿವ್ ಬಂದಿದ್ದರೂ, 7 ದಿನ ಹೋಂ ಕ್ವಾರಂಟೈನ್ ಆಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








