Long Way To Go | ಟೆಸ್ಟ್ ಗೆ ಗುಡ್ ಬೈ ಹೇಳುವ ಬಗ್ಗೆ ಜಡ್ಡು ಸ್ಪಷ್ಟನೆ Jadeja saaksha tv
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ನನ್ನ ವಿದಾಯ ಘೋಷಣೆಗೆ ತುಂಬಾ ಸಮಯವಿದೆ ಎಂದು ಜಡೇಜಾ ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ರವೀಂದ್ರ ಜಡೇಜಾ ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಏಕದಿನ ಮತ್ತು ಟಿ 20 ಮಾದರಿ ಕ್ರಿಕೆಟ್ ಗಳತ್ತ ಗಮನ ಹರಿಸುವ ನಿಟ್ಟಿನಲ್ಲಿ ಜಡೇಜಾ ಟೆಸ್ಟ್ ಕ್ರಿಕೆಟ್ ತೊರೆಯಲಿದ್ದಾರೆ. ಈ ಬಗ್ಗೆ ಸ್ವತಃ ಜಡೇಜಾ ಸಹ ಆಟಗಾರರೊಬ್ಬರು ದೈನಿಕ್ ಜಾಗರಣ್ ಗೆ ತಿಳಿಸಿದ್ದಾರೆ ಎಂದು ವರದಿಯಾಗಿತ್ತು.
ಈ ಕುರಿತು ಟ್ವೀಟ್ ಮಾಡಿರುವ ರವೀಂದ್ರ ಜಡೇಜಾ, Long Way To Go ಎಂದು ಬರೆದುಕೊಂಡು ತಮ್ಮ ಒಂದು ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಅವೆಲ್ಲವೂ ಗಾಳಿ ಸುದ್ದಿ ಎಂದು ತಳ್ಳಿ ಹಾಕಿದ್ದಾರೆ.
ಇನ್ನು ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ನಲ್ಲಿ ಜಡೇಜಾ ಗಾಯಗೊಂಡಿದ್ದರು. ಹೀಗಾಗಿ ಅವರು ಮುಂಬೈ ನಲ್ಲಿ ನಡೆದ ಟೆಸ್ಟ್ ಪಂದ್ಯದಿಂದ ದೂರ ಉಳಿದಿದ್ದರು. ಮೊಣಕಾಲಿನ ನೋವಿನಿಂದ ಬಳಲುತ್ತಿರುವ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳಲು ಸುಮಾರು ಆರು ತಿಂಗಳುಗಳಲಾಗಲಿವೆ. ಹೀಗಾಗಿ ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಜಡೇಜಾ ಹೊರಗುಳಿದಿದ್ದಾರೆ.
ಇನ್ನು ಸರ್ ಜಡೇಜಾ ಭಾರತ ತಂಡದ ಖಾಯಂ ಆಟಗಾರರಾಗಿದ್ದಾರೆ. ಟಿ 20, ಏಕದಿನ, ಟೆಸ್ಟ್ ಹೀಗೆ ಮೂರು ಮಾದರಿ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಟ್ರಂಪ್ ಕಾರ್ಡ್ ಆಗಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ರವೀಂದ್ರ ಜಡೇಜಾ ಪಾತ್ರ ಪ್ರಮುಖವಾಗಿತ್ತು. ಆದ್ರೆ ಗಾಯಗೊಂಡಿರುವ ಕಾರಣ ಅವರು ದಕ್ಷಿಣ ಆಫ್ರಿಕಾ ಟೂರ್ ಮಿಸ್ ಮಾಡಿಕೊಳ್ಳಲಿದ್ದಾರೆ. ಅವರ ಸ್ಥಾನಕ್ಕೆ ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ.
ಇನ್ನು ಟೀಂ ಇಂಡಿಯಾ ಪರ 57 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 232 ವಿಕೆಟ್ ಪಡೆದು 2195 ರನ್ ಗಳಿಸಿದ್ದಾರೆ.