ಬೆಂಗಳೂರು: ಲೈಂಗಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣಗೆ (H.D.Revanna) ಲುಕ್ಔಟ್ ನೋಟಿಸ್ ನೀಡಲಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ (SIT) ನೋಟಿಸ್ ನೀಡಿದ್ದರೂ ರೇವಣ್ಣ ಗೈರಾದ ಹಿನ್ನೆಲೆಯಲ್ಲಿ ದೇಶ ಬಿಟ್ಟು ಹೋಗುವ ಸಾಧ್ಯತೆ ಹಿನ್ನೆಲೆಯಲ್ಲಿ ಲುಕ್ಔಟ್ ನೋಟಿಸ್ ನೀಡಲಾಗಿದೆ. ಕಳೆದ ಮೂರು ದಿನಗಳಿಂದ ಹೆಚ್.ಡಿ.ರೇವಣ್ಣ ಬಹಿರಂಗವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಈಗ ಎರಡನೇ ಪ್ರಕರಣದ ನಂತರ ರೇವಣ್ಣಗೆ ನೋಟಿಸ್ ನೀಡಲಾಗಿದೆ.
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿದೇಶಕ್ಕೆ ಹೋಗಿದ್ದು, ಜರ್ಮನಿಯಲ್ಲಿ ಪ್ರಜ್ವಲ್ ಇದ್ದಾರೆ ಎನ್ನಲಾಗಿದೆ. ಅಲ್ಲಿಂದ ನಂತರ ದುಬೈಗೆ ತೆರಳಲಿದ್ದಾರೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣದಲ್ಲಿ ಮಹಿಳೆಯೊಬ್ಬರ ಅಪಹರಣಕ್ಕೆ ಪ್ರತ್ಯೇಕ ಎಫ್ಐಆರ್ ಕುರಿತು ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆಲಿಸಲಿದೆ.