ತುಮಕೂರು : ಗಣಪತಿ ವಿಸರ್ಜನೆ ವೇಳೆ ಪ್ರಸಾದ ಸೇವಿಸಿದ 60ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ತಿಪಟೂರು ತಾಲೂಕಿನ ಬಿಳಿಗೆರೆ ಕಾಲೋನಿಯಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಬಿಳಿಗೆರೆ ಕಾಲೋನಿಯಲ್ಲಿ ಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಸಾದವನ್ನು ವಿತರಿಸಲಾಗಿತ್ತು. ಈ ವೇಳೆ ಪ್ರಸಾದ ಸೇವಿಸಿದ 60ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
![]()
ಅಸ್ವಸ್ಥರಲ್ಲಿ ಸುಸ್ತು, ವಾಂತಿ, ಭೇದಿ ಉಂಟಾಗಿದ್ದು, ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.









