ರಾಯಚೂರು: ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಯರಗೇರಾದ (Yargera) ಮಂತ್ರಾಲಯ (Mantralaya) ರಸ್ತೆಯ ಹತ್ತಿರ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ (Andhrapradesh) ಮಾಧವರಂನ ಮದನಪಲ್ಲಿ ಗ್ರಾಮದ 37 ವರ್ಷದ ರೆಡ್ಡಿ ಎನ್ನಲಾಗಿದೆ.
ಬೈಕ್ ಸವಾರ ರಾಯಚೂರಿನಿಂದ (Raichuru) ಮಾಧವರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಂಧ್ರಪ್ರದೇಶದಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.