ದಕ್ಷಿಣ ಕನ್ನಡ: ಲಾರಿ ಬ್ರೇಕ್ ಫೇಲ್ ಆದ ಪರಿಣಾಮ ಸರಣಿ ಅಪಘಾತ ನಡೆದಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡದ ಎಡಪದವು ರಾಮಮಂದಿರದ ಹತ್ತಿರ ಮಣ್ಣಿನ ಲಾರಿ ಬ್ರೇಕ್ ಫೇಲ್ ಆದ ಕಾರಣ ಈ ಘಟನೆ ನಡೆದಿದೆ. ಲಾರಿ ಬ್ರೇಕ್ ಫೇಲ್ ಆಗುತ್ತಿದ್ದಂತೆ ಚಾಲಕ, ಸುಮಾರು 500 ಮೀಟರ್ ದೂರದವರೆಗೂ ಲಾರಿ ನಿಯಂತ್ರಿಸಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದವರು ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂತರ ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ ಅಫ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ರಸ್ತೆಗೆ ಆ ವಾಹನ ಉರುಳಿ ಬಿದ್ದಿದೆ. ಅದರಲ್ಲಿದ್ದ ಎಣ್ಣೆ ಪಾಕೆಟ್ ಗಳು ರಸ್ತೆ ಪಾಲಾಗಿವೆ. ನಂತರ ಎದುರಿಗೆ ಬರುತ್ತಿದ್ದ ಟ್ಯಾಂಕರ್ ಲಾರಿ ತಪ್ಪಿಸಲು ಹೋಗಿ ರಸ್ತೆಗೆ ಉರುಳಿ ಬಿದ್ದಿದೆ. ನಂತರ ಲಾರಿ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ನಿಂತಿದೆ. ಈ ಲಾರಿ ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.