ಬೀದರ್: ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಎಂಬ ಗ್ರಾಮದ ಬಳಿ ನಡೆದಿದೆ. ಗ್ರಾಮದ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಈ ಘಟನೆ ನಡೆದಿದೆ. ಆಟೋದಲ್ಲಿದ್ದವರನ್ನು ಮಹಾರಾಷ್ಟ್ರ ಮೂಲದವರು ಎನ್ನಲಾಗಿದೆ. ಗಾಯಾಳುಗಳನ್ನು ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.