ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ಗೊಂದಲ : ವಕ್ಫ್ ಮಂಡಳಿ ಸ್ಪಷ್ಟನೆ

1 min read
Loud speaker

ಮಸೀದಿಯಲ್ಲಿ ಲೌಡ್ ಸ್ಪೀಕರ್ ಬಳಕೆ ಗೊಂದಲ : ವಕ್ಫ್ ಮಂಡಳಿ ಸ್ಪಷ್ಟನೆ

ಬೆಂಗಳೂರು : ಮಸೀದಿ ಮತ್ತು ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಧ್ವನಿರ್ಧಕ ಬಳಸುವ ವಿಚಾರದಲ್ಲಿ ಎದ್ದಿರುವ ಗೊಂದಲಗಳಕ್ಕೆ ರಾಜ್ಯ ವಕ್ಫ್ ಮಂಡಳಿ ಸ್ಪಷ್ಟೀಕರಣ ನೀಡಿದೆ.

ಮಸೀದಿಗಳಲ್ಲಿ ಪ್ರಾರ್ಥನೆಗಾಗಿ ಆರರಿಂದ 10 ಗಂಟೆಯ ವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ.

ಹಾಗೇ ರಾತ್ರಿ 10 ಗಂಟೆಯಿಂದ ಬೆಳಗ್ಗೆ ಆರು ಗಂಟೆ ನಡುವಿನ ಅವಧಿಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಕರ್ನಾಟಕ ವಕ್ಫ್ ಮಂಡಳಿ ಹೊಸ ನಿಯಮ ಜಾರಿಗೆ ತಂದಿದೆ.

Loud speaker

ಶಬ್ಧ ಮಾಲಿನ್ಯ ನಿಯಂತ್ರಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿರುವ ಇಲಾಖೆ ಕೆಲವೊಂದು ನಿಯಮಗಳನ್ನ ಪಾಲಿಸುವಂತೆ ಸೂಚಿಸಿದೆ.

ನಿಯಮಗಳು ಇಂತಿವೆ

ರಾತ್ರಿ 10 ರಿಂದ ಬೆಳಗ್ಗೆ 6ರ ತನಕ ಧ್ವನಿವರ್ಧಕ ಬಳಕೆಗೆ ನಿಬರ್ಂಧ
ಬೆಳಗ್ಗೆ ಆರರಿಂದ 10ರವರೆಗೆ ಬಳಸಲಾಗುವ ಧ್ವನಿವರ್ಧಕದ ಶಬ್ಧವೂ ಮಿತಿಯಲ್ಲಿರಬೇಕು.
ಮಸೀದಿಯಲ್ಲಿ ನಡೆಯುವ ಧಾರ್ಮಿಕ, ಸಾಂಸ್ಕøತಿಕ ಚಟುವಟಿಕೆಗಳಿಗೆ ಕಟ್ಟಡದ ಆವರಣದಲ್ಲಿ ಧ್ವನಿವರ್ಧಕ ಬಳಕೆ.
ಪಟಾಕಿ ಅಥವಾ ಸಿಡಿಮದ್ದುಗಳನ್ನ ಬಳಸಬಾರದು.
ಮಸೀದಿ, ದರ್ಗಾ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು.
ದರ್ಗಾ, ಮಸೀದಿ ಬಳಿ ಭಿಕ್ಷಾಟನೆ ಪ್ರೋತ್ಸಾಹಿಸಬಾರದು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd