LOVE | ಕೆರೆಗೆ ಹಾರಿ ಪ್ರಾಣ ಬಿಟ್ಟ ಪ್ರೇಮಿಗಳು
ದಾವಣಗೆರೆಯ ಬೆಂಕಿಕೆರೆ ಗ್ರಾಮದಲ್ಲಿ ಘಟನೆ
ನಾಗರತ್ನ, ಚರಣ್ ಆತ್ಮಹತ್ಯೆ ಮಾಡಿಕೊಂಡ ಜೋಡಿ
ಇಬ್ಬರ ಮೃತದೇಹ ಕೆರೆಯಲ್ಲಿ ಪತ್ತೆ
ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ದಾವಣಗೆರೆ : ಪ್ರೇಮಿಗಳಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದಲ್ಲಿ ನಡೆದಿದೆ.
21 ವರ್ಷದ ನಾಗರತ್ನ, 22 ವರ್ಷದ ಚರಣ್ ಮೃತರಾಗಿದ್ದು, ಇವರು ಬೆಂಗಳೂರಿನ ನಿವಾಸಿಗಳಾಗಿದ್ದಾರೆ.
ನಿನ್ನೆ ರಾತ್ರಿ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಇವರು ಕೆರೆಯ ಪಕ್ಕದಲ್ಲಿ ಬೈಕ್ ನಿಲ್ಲಿ ಕಾಣಿಯಾಗಿದ್ದರು.
ಇಂದು ಇಬ್ಬರ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ. ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಅಂದಹಾಗೆ ಕಳೆದ ಎರಡು ವರ್ಷಗಳ ಹಿಂದೆ ನಾಗರತ್ನ ಅವರನ್ನ ಪ್ರಸನ್ನ ಕುಮಾರ್ ಎಂಬುವವರು ಮದುವೆಯಾಗಿದ್ದರು.
ಎರಡು ದಿನಗಳ ಹಿಂದೆ ನಾಗರತ್ನ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರಂತೆ.
ಇದೀಗ ಚರಣ್ ಜೊತೆಗೆ ನಾಗರತ್ನ ಅವರ ಮೃತದೇಹ ಪತ್ತೆಯಾಗಿದೆ. ಇನ್ನು ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








