‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ , ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು
ಬಿಡದಿ : ಅಜಯ್ ರಾವ್ ಹಾಗೂ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಲವ್ ಯು ರಚ್ಚು’ ಸಿನಿಮಾ ಶೂಟಿಂಗ್ ವೇಳೆ ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವನ್ನಪ್ಪಿದ್ದಾರೆ. 35 ವರ್ಷದ ವಿವೇಕ್ ಎಂಬುವವರು ಮೃತ ಫೈಟರ್ ಆಗಿದ್ದಾರೆ. ಬಿಡದಿಯ ಈಗಲ್ ಟನ್ ರೆಸಾರ್ಟ್ ಬಳಿಯಲ್ಲಿ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಈ ದುರಂತ ಸಂಭವಿಸಿದೆ. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಕ್ಕೆ ಗುರುದೇಶಪಾಂಡೆ ನಿರ್ಮಾಣವಿದೆ.
ಕಳೆದ 5 ದಿನಗಳಿಂದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಫೈಟ್ ಮಾಸ್ಟರ್ ವಿನೋದ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮನಗರದ ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ.. ಅವಘಡ ನಡೆದ ಬಳಿಕ ಚಿತ್ರತಂಡ ಚಿತ್ರೀಕರಣವನ್ನ ನಿಲ್ಲಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರಿಗೆ ಗಾಯವಾಗಿತ್ತು. ಇದರಲ್ಲಿ ಒಬ್ಬ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನಪ್ಪಿದ್ರೆ ಮತ್ತೊಬ್ಬರನ್ನ ಚಿಕಿತ್ಸೆಗಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.