ಕುಟುಂಬಸ್ಥರು ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳು ಆತ್ಮಹತ್ಯೆ… Lovers commit suicide
ಪ್ರೀತಿಗೆ ವಿರುದ್ಧವಾಗಿ ಕುಟುಂಬಸ್ಥರು ಮದುವೆ ಮಾಡಲು ನಿರಾಕರಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ದಾರುಣ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಶರತ್ ಹೈದ್ರಾಬಾದ್ ನಲ್ಲಿ ಎಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಪದವಿಧರರಾಗಿರುವ ಸಂಗೀತ ಹಲವು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.
ಆದರೆ ಇತ್ತೀಚೆಗೆ ಸಂಗೀತಾಗೆ ಬೇರೊಂದು ಹುಡುಗನ ಜೊತೆ ನಿಶ್ಚಿತಾರ್ಥ ನಡೆದಿತ್ತು. ಈ ವಿಷಯ ತಿಳಿದ ಶರತ್ ಮೊದಲು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯಕರ ಶರತ್ ಸಾವಿನ ಸುದ್ದಿ ಕೇಳಿದ ಸಂಗೀತಾ ಬಾವಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Lovers commit suicide as family refuses to marry








