ಬೆಂಗಳೂರು: ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಸಾಮಾಜಿಕ ಜಾಲತಾಣದ ಹುಚ್ಚು ಹೆಚ್ಚಾಗುತ್ತಿದೆ. ಅದರಲ್ಲೂ ಹಲವರಂತೂ ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. ಇದು ತೀವ್ರ ಆತಂಕಕ್ಕೆ ಕಾರಣವಾಗುತ್ತಿದೆ. ರೀಲ್ಸ್ (Social Media Reels) ಹಾಕುವ ಸಲುವಾಗಿ ಹಲವರು ರಿಸ್ಕ್ ತೆಗೆದುಕೊಳ್ಳುವುದನ್ನು ನೋಡಿದ್ದೇವೆ. ಈಗ ಪ್ರೇಮಿಗಳ ಜಾಲಿ ರೈಡ್ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರೇಮಿಗಳಿಬ್ಬರು ಜಾಲಿ ರೈಡ್ (Lovers Jolly Ride) ಮಾಡುತ್ತ ಬೈಕ್ ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಯುವಕನೊಬ್ಬಬೈಕ್ ಚಲಾಯಿಸಿದ್ದಾನೆ. ಈ ಜೋಡಿ ರೋಮ್ಯಾನ್ಸ್ ಮಾಡುತ್ತ ಬೈಕ್ ಚಲಾಯಿಸಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರೇಮಿಗಳಿಬ್ಬರ ಜಾಲಿರೈಡ್ ನ್ನು ಹಿಂದೆ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಪ್ರಾಂಕ್ ಮಾಡುವ ಉದ್ದೇಶದಿಂದ ಈ ವೀಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾಗುತ್ತಿದೆ. ಯುವಕನೇ ಯುವತಿಯ ರೀತಿ ಹೇರ್‌ಸ್ಟೈಲ್ ಮಾಡಿಕೊಂಡು ವೀಡಿಯೋ ಚಿತ್ರೀಕರಣ ಮಾಡಿರುವ ಶಂಕೆ ಕೂಡ ಇದೆ. ಆದರೆ, ಈ ಕುರಿತು ದೂರು ದಾಖಲಾಗಿಲ್ಲ. ಜನರು ಮಾತ್ರ ತರಾಟೆಗೆ ತೆಗೆದುಕೊಂಡಿದ್ದಾರೆ.








