ಪ್ರೀತಿಗೆ ಒಪ್ಪದ ಮನೆಮಂದಿ : ಪ್ರೇಮಿಗಳಿಬ್ಬರು ಆತ್ಮಹತ್ಯೆ lovers Suicide
ಹಾವೇರಿ : ಪ್ರೇಮ ವಿವಾಹಕ್ಕೆ ಒಪ್ಪದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿ ನಾಗನೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವಿದ್ಯಾಶ್ರೀ ಗಾಳಿ(22) ಮತ್ತು ಇರ್ಷಾದ್ ಕುಡಚಿ(23) ಎಂದು ಗುರುತಿಸಲಾಗಿದೆ.
ಇವರು ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಈ ವಿಚಾರ ತಿಳಿದ ವಿದ್ಯಾಶ್ರೀ ಗಾಳಿ ಮನೆಯವರು ಆಕೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ಮಾಡಿದ್ದರು.
ಇದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಬೆಳಗಿನ ಜಾವ ಮನೆಯಿಂದ ವಿದ್ಯಾಶ್ರೀ ಪರಾರಿಯಾಗಿದ್ದು, ಈ ಕುರಿತು ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ವಿದ್ಯಾಶ್ರೀ ಕಾಣೆಯಾಗಿದ್ದ ಪ್ರಕರಣ ದಾಖಲಾಗಿತ್ತು.
ಆದ್ರೆ ಇಂದು ವಿದ್ಯಾಶ್ರೀ ಶವವಾಗಿ ಪತ್ತೆಯಾಗಿದ್ದಾಳೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಸಿಪಿಐ ನಾಗಮ್ಮ, ಮಹಿಳಾ ಠಾಣೆ ಸಿಪಿಐ ಚಿದಾನಂದ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










