ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ (Sleeper Coach Bus) ನಲ್ಲಿ ಪ್ರೇಮಿಗಳು ವಿಷ ಸೇವಿಸಿ ಮಲಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಈ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಹತ್ತಿರ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಹತ್ತಿರ ಈ ಘಟನೆ ಬೆಳಕಿಗೆ ಬಂದಿದೆ. ಹೇಮಾ ರಾಮಕೃಷ್ಣಪ್ಪ (20) ಸಾವನ್ನಪ್ಪಿದ ಯುವತಿ. ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಿ.ಕಾಂ ಫೈನಲ್ ಓದುತ್ತಿದ್ದ ಹೇಮಾಗೆ ಬಾಗಲಕೋಟೆ ಮೂಲಕ ಅಖಿಲ್ ಎಂಬಾತನೊಂದಿಗೆ ಪ್ರೇಮಾಂಕುರವಾಗಿದೆ. ಆದರೆ, ಇವರಿಬ್ಬರ ಮದುವೆಗೆ ಮನೆಯವರು ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ಈ ಜೋಡಿ ಸಾಯುವ ತೀರ್ಮಾನಕ್ಕೆ ಬಂದಿದೆ.
ಇದಕ್ಕು ಮುನ್ನ ಮದುವೆಗೆ ನೀವು ಒಪ್ಪಿಗೆ ನೀಡಿಲ್ಲ. ಹೀಗಾಗಿ ಬಾಂಬೆಗೆ ಹೋಗುತ್ತಿದ್ದೇವೆ ಯುವತಿ ಫೋನ್ ಮಾಡಿ ಹೇಳಿದ್ದಳು. ಬಳಿಕ ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಕುಡಿದು ಮಲಗಿದ್ದಾರೆ. ದಾರಿ ಮಧ್ಯೆ ಊಟಕ್ಕೆ ಬಸ್ ನಿಲ್ಲಿಸಿದಾಗ ಬಸ್ ನಲ್ಲಿದ್ದವರಿಗೆ ಅನುಮಾನ ಬಂದಿದೆ. ವಿಷದ ವಾಸನೆ ಬಂದ ಕೂಡಲೇ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಯತ್ನ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಯುವತಿ ಸಾವನ್ನಪ್ಪಿದ್ದು, ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾನೆ. ಈ ಕುರಿತು ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.