LPG ಸಿಲಿಂಡರ್ ದರ ಹೆಚ್ಚಳ!
LPG ಸಿಲಿಂಡರ್ ದರ 50 ರೂಪಾಯಿ ಏರಿಕೆ..!
ಗೃಹ ಬಳಕೆಯ LPG ಸಿಲಿಂಡರ್ ಬೆಲೆ ಏರಿಕೆ
ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂಪಾಯಿ
ರಷ್ಯಾ, ಉಕ್ರೇನ್ ಯುದ್ಧದ ಬೆನ್ನಲ್ಲೇ ತೈಲ ದರ ಏರಿಕೆ
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೆ ದೇಶದಾದ್ಯಂತ ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ.
ಇಂದಿನಿಂದ ಅನ್ವಯವಾಗುವಂತೆ ಗೃಹ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ.
ಇದರೊಂದಿಗೆ 14.2 ಕೆಜಿಯ LPG ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ. ಆಗಿದೆ.
ರಷ್ಯಾ ಮತ್ತು ಉಕ್ರೇನ್ ಯುದ್ಧದ ಮತ್ತು ಪಂಚರಾಜ್ಯಗಳ ಚುನಾವಣೆ ಬಳಿಕ ಬೆಲೆ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿತ್ತು.
ಅದರಂತೆ ಇದೀಗ ಪೆಟ್ರೋಲ್, ಡೀಸೆಲ್ ಬೆಲೆಯ ಜೊತೆಗೆ ಮನೆ ಬಳಕೆಯ ಅಡುಗೆ ಅನಿಲ ದರ ಕೂಡ ಹೆಚ್ಚಳ ಮಾಡಲಾಗಿದೆ.
ಇತ್ತ ದೇಶದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ.
ಅದರಂತೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 96.21 ರೂಪಾಯಿ, ಡೀಸೆಲ್ ಲೀಟರ್ಗೆ 87.47 ರೂಪಾಯಿ,
ಚೆನ್ನೈನಲ್ಲಿ ಪೆಟ್ರೋಲ್ ಲೀಟರ್ಗೆ 102.16 ರೂಪಾಯಿ, ಡೀಸೆಲ್ ಲೀಟರ್ಗೆ 92.19 ರೂಪಾಯಿ,
ಮುಂಬೈನಲ್ಲಿ ಲೀಟರ್ಗೆ ಪೆಟ್ರೋಲ್ ಬೆಲೆ 110.82 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.00 ರೂಪಾಯಿ ಆಗಿದೆ. LPG cylinder price increased by Rs 50