LPG ಸಿಲಿಂಡರ್ ಬ್ಲಾಸ್ಟ್ – ದುರಂತದಲ್ಲಿ 7 ಸಾವು , ಹಲವರ ಸ್ಥಿತಿ ಗಂಭೀರ
ಗುಜರಾತ್ : ಅನಿಲ ಸೋರಿಕೆಯಾಗಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿದ್ದ ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಗಾಯಾಳುಗಳ ಪೈಕಿ ಅನೇಕರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.. ಈ ಘಟನೆ ಗುಜರಾತ್ನ ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೊಠಡಿಯೊಂದರಲ್ಲಿ ನಡೆದಿತ್ತು. ಈ ಘಟನೆ ಜು.20 ಗುರುವಾರ ರಾತ್ರಿ ನಡೆದಿತ್ತು. ಈ ಅವಘಡದಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬದವರು ಸೇರಿ 10 ಜನರಿಗೆ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಈವರೆಗೂ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಅಸ್ಲಾಲಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ..
ಮೃತ ಕಾರ್ಮಿಕರು ಮಧ್ಯಪ್ರದೇಶದ ಗುನಾ ಜಿಲ್ಲೆಯ ಮಧುಸೂದನಗಢದವರು ಎನ್ನಲಾಗಿದೆ. ಇನ್ನೂ ಸಾವಿಗೀಡಾದ ಕಾರ್ಮಿಕರು ಮಧ್ಯಪ್ರದೇಶ ಮೂಲದವರಾದ ಹಿನ್ನೆಲೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ . ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ. ಇನ್ನೂ ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಧನ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.