ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

LSG vs GT Match | ಅಗ್ರಸ್ಥಾನಕ್ಕಾಗಿ ದೋಸ್ತಿಗಳ ಕಾಳಗ

Mahesh M Dhandu by Mahesh M Dhandu
May 10, 2022
in Newsbeat, Sports, ಕ್ರಿಕೆಟ್
lsg-vs-gt-match-Gujarat Titans and Lucknow Super Giants look to seal playoff saaksha tv

lsg-vs-gt-match-Gujarat Titans and Lucknow Super Giants look to seal playoff saaksha tv

Share on FacebookShare on TwitterShare on WhatsappShare on Telegram

LSG vs GT Match | ಅಗ್ರಸ್ಥಾನಕ್ಕಾಗಿ ದೋಸ್ತಿಗಳ ಕಾಳಗ

ಇಂಡಿಯನ್ ಪ್ರಿಮಿಯರ್ ಲೀಗ್ 57 ನೇ ಪಂದ್ಯದಲ್ಲಿ ಅಗ್ರಸ್ಥಾನಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.  ಈ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯಲಿದೆ.  ಕೆ.ಎಲ್ ರಾಹುಲ್ ನಾಯಕತ್ವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಲಕ್ನೋ ಸೂಪರ್ ಜೈಂಟ್ಸ್ ತಂಡ 15ನೇ ಸೀಸನ್  ನಲ್ಲಿ  ಈವರೆಗೂ 11 ಪಂದ್ಯಗಳನ್ನಾಡಿದೆ. ಈ ಪೈಕಿ ಎಂಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದ ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ರಾಹುಲ್ ಬಳಗ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇತ್ತ ಹಾರ್ದಿಕ್ ಬಳಗ ಈ ಸೀಸನ್ ನಲ್ಲಿ 11 ಪಂದ್ಯಗಳನ್ನಾಡಿದೆ. ಈ ಪೈಕಿ ಗುಜರಾತ್ ತಂಡ ಎಂಟು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಅಂದಹಾಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಸೆಣಸಿತ್ತು. ಇದರಲ್ಲಿ ಲಕ್ನೋ ತಂಡ 75 ರನ್ ಗಳಿಂದ ಜಯಸಾಧಿಸಿ ರನ್ ರೇಟ್ ಆಧಾರವಾಗಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕೆಕೆಆರ್ ತಂಡದ ವಿರುದ್ಧ ಕ್ವಿಂಟನ್ ಡಿ ಕಾಕ್ 50 ರನ್, ದೀಪಕ್ ಹೂಡಾ 41 ರನ್ ಗಳಿಸಿದರು.

ಮತ್ತೊಂದು ಕಡೆ ಗುಜರಾತ್ ಟೈಟಾನ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಗುಜರಾತ್ ಐದು ರನ್ ಗಳಿಂದ ಸೋಲು ಕಂಡಿದೆ. ಇದರಲ್ಲಿ ವೃದ್ಧಿಮಾನ್ ಸಹಾ 55 ರನ್ ಮತ್ತು ಶುಭ್ ಮನ್ 52 ರನ್ ಗಳಿಸಿದ್ದರು. ಮುಂಬೈ ವಿರುದ್ಧ ಕೇವಲ ಐದು ರನ್ ಗಳಿಂದ ಸೋಲು ಕಂಡಿದ್ದು, ಗುಜರಾತ್ ಗೆ ಅಸಮಾಧಾನ ತಂದಿದ್ದು, ಇಂದಿನ ಪಂದ್ಯ ಗೆದ್ದು, ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ಪ್ಲಾನ್ ಮಾಡಿಕೊಂಡಿದೆ.

lsg-vs-gt-match-Gujarat Titans and Lucknow Super Giants look to seal playoff    saaksha tv
lsg-vs-gt-match-Gujarat Titans and Lucknow Super Giants look to seal playoff saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಲಕ್ನೋ ಸೂಪರ್ ಜೈಂಟ್ಸ್ ತಂಡ ಬಲಿಷ್ಠವಾಗಿದೆ. ಲಕ್ನೋ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸಾಲಿಡ್ ಆಗಿದೆ. ಆರಂಭಿಕರಾಗಿ ಬರುವ ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡುತ್ತಿದ್ದಾರೆ. ಇದು ತಂಡದ ಪ್ಲಸ್ ಪಾಯಿಂಟ್ ಆಗಿದೆ. ಮಿಡಲ್ ಆರ್ಡರ್ ನಲ್ಲಿ ದೀಪಕ್ ಹೂಡಾ, ಕೃನಾಲ್ ಪಾಂಡ್ಯ ತಂಡಕ್ಕೆ ಆಧಾರವಾಗುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಮಾರ್ಕಸ್ ಸ್ಟೋಯ್ನಿಸ್ ಫಾರ್ಮ್ ಗೆ ಬಂದಿರೋದು ತಂಡಕ್ಕೆ ಮತ್ತಷ್ಟು ಬೂಸ್ಟ್ ನೀಡಿದೆ.  ಆಯುಷ್ ಬದೋನಿ ಮೊದಲಿನ ಟಚ್ ನಲ್ಲಿ ಕಾಣಿಸದೇ ಇದ್ದರೂ ಯಾವುದೇ ಹಂತದಲ್ಲಿ ಬ್ಲಾಸ್ ಆಗುವ ಸಾಮೃರ್ಥ್ಯ ಹೊಂದಿದ್ದಾರೆ. ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್  ಆಲ್ ರೌಂಡರ್ ಆಟವಾಡುತ್ತಿದ್ದಾರೆ. ಬೌಲಿಂಗ್ ನಲ್ಲಿ ಲಕ್ನೋ ತಂಡ ಬಲಿಷ್ಟವಾಗಿದೆ. ದುಷ್ಮಂತಾ ಚಮೀರಾ, ಮೊಹ್ನಿಸ್ ಖಾನ್, ಅವೇಶ್ ಖಾನ್ ವಿಕೆಟ್ ಪಡೆಯುತ್ತಿದ್ದಾರೆ. ಇವರಿಗೆ ಹೋಲ್ಡರ್, ಸ್ಟೋಯ್ನಿಸ್ ಸಾಥ್ ನೀಡಬೇಕಿದೆ. ರವಿ ಬಿಷ್ನೋಯಿ ದುಬಾರಿಯಾದ್ರೂ ವಿಕೆಟ್ ಪಡೆಯುತ್ತಿದ್ದಾರೆ.

 ಗುಜರಾತ್ ಟೈಟಾನ್ಸ್ ವಿಚಾರಕ್ಕೆ ಬಂದರೇ

ಸಂಘಟಿತ ಆಟದ ಜೊತೆ ಹಾರ್ದಿಕ್ ಪಾಂಡ್ಯ ಅವರ ನಾಯಕತ್ವ ಕೂಡ ಗುಜರಾತ್ ಟೈಟಾನ್ಸ್ ತಂಡದ ಯಶಸ್ವಿನ ಸಿಕ್ರೇಟ್ ಆಗಿದೆ. ಆರಂಭಿಕರಾದ ವೃದ್ದಿಮಾನ್ ಸಾಹಾ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಬ್ಯಾಡ್ ಫಾರ್ಮ್ ನಲ್ಲಿದ್ದ ಶುಬ್ಮನ್ ಗಿಲ್ ಮುಂಬೈ ವಿರುದ್ಧದ ಪಂದ್ಯದಲ್ಲಿ ಒಳ್ಳೆ ಟಚ್ ಗೆ ಬಂದಿದ್ದಾರೆ. ಸಾಯಿ ಸುದರ್ಶನ್ ನಿರೀಕ್ಷೆಗೂ ಮೀರಿದ ಆಟವನ್ನಾಡುತ್ತಿದ್ದಾರೆ. ನಾಯಕನ ಜವಾಬ್ದಾರಿಯನ್ನು ಅರಿತುಕೊಂಡು ಹಾರ್ದಿಕ್ ಪಾಂದ್ಯ ಆಡುತ್ತಿದ್ದಾರೆ. ಡೇವಿಡ್ ಮಿಲ್ಲರ್ ಸಮಯೋಚಿತವಾಗಿ ಬ್ಯಾಟ್ ಬೀಸುತ್ತಿದ್ದಾರೆ.  ಇನ್ನೊಂದೆಡೆ ರಶೀದ್ ಖಾನ್ ಮತ್ತು ರಾಹುಲ್ ಟೆವಾಟಿಯಾ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲಿ ಮ್ಯಾಚ್ ಫಿನಿಶರ್ ಆಗಿ ಹೊರಹೊಮ್ಮುತ್ತಿರುವುದು ತಂಡಕ್ಕೆ ವರದಾನವಾಗುತ್ತಿದೆ. ಹಾಗೇ ಬೌಲಿಂಗ್ ನಲ್ಲಿ ಅಲ್ಝಾರಿ ಜೊಸೇಫ್, ಲೂಕಿ ಫಗ್ರ್ಯುಸನ್ ಮಾರಕವಾಗಿ ಪರಿಣಮಿಸುತ್ತಿದ್ದಾರೆ. ಮಹಮ್ಮದ್ ಶಮಿ ಕಳೆದ ಪಂದ್ಯದಲ್ಲಿ ದುಬಾರಿಯಾದ್ರೂ ಅಪಾಯಕಾರಿ ವೇಗಿ ಎಂಬುದನ್ನು ಮರೆಯುವ ಹಾಗಿಲ್ಲ. ಈ ನಡುವೆ, ಪ್ರದೀಪ್ ಸಂಗ್ವಾನ್ ಮತ್ತು ಯಶ್ ದಯಾಲ್ ನಡುವೆ ಅಂತಿಮ 11ರ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಲು ಪೈಪೋಟಿ ಇದೆ.

ಒಟ್ಟಿನಲ್ಲಿ ಗುಜರಾತ್ ಟೈಟಾನ್ಸ್ ತಂಡ ಯಾವುದೇ ರೀತಿಯ ಒತ್ತಡವಿಲ್ಲದೆ ಆಡಲಿದೆ. ಆದ್ರೂ ಗೆಲುವನ್ನು ಎದುರು ನೋಡುತ್ತಿದೆ. ಪ್ರಯೋಗಕ್ಕೆ ಮುಂದಾಗುವ ಯಾವುದೇ ಸಾಧ್ಯತೆಗಳಿಲ್ಲ. lsg-vs-gt-match-Gujarat Titans and Lucknow Super Giants look to seal playoff 

Tags: #Saaksha TVGujarat Titanslsg-vs-gt-matchlucknow-super-giants
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram