LSG vs KKR Match | ಲಕ್ನೋ ವಿರುದ್ಧ ಗೆಲುವು ಸಾಧಿಸುತ್ತಾ ಕೆಕೆಆರ್
ಶನಿವಾರದ ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಗುದ್ದಾಟ ನಡೆಸಲಿವೆ. ಇದು ಇಂಡಿಯನ್ ಪ್ರಿಮಿಯರ್ ಲೀಗ್ 53ನೇ ಪಂದ್ಯವಾಗಿದೆ. ಈ ಪಂದ್ಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ಲೇ ಆಫ್ಸ್ ದೃಷ್ಠಿಯಿಂದ ಈ ಪಂದ್ಯದಲ್ಲಿ ಗೆಲುವು ಉಭಯ ತಂಡಗಳಿಗೂ ಅನಿವಾರ್ಯವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವಿಗಾಗಿ ಕೆಕೆಆರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ.
ಕೆ.ಎಲ್.ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಸೀಸನ್ ನಲ್ಲಿ ಈವರೆಗೂ 10 ಪಂದ್ಯಗಳನ್ನಾಡಿದೆ. ಈ ಪೈಕಿ ಏಳು ಪಂದ್ಯಗಳನ್ನ ಗೆದ್ದು, ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 15ನೇ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದೆ. ಈ ಪೈಕಿ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಆರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ 8 ಎಂಟನೇ ಸ್ಥಾನಸದಲ್ಲಿದೆ.
ಅಂದಹಾಗೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಲಕ್ನೋ ತಂಡ ಆರು ರನ್ ಗಳಿಂದ ಗೆಲುವು ಸಾಧಿಸಿದೆ. ಲಕ್ನೋ ಪರ ಕೆ.ಎಲ್.ರಾಹುಲ್ 77 ರನ್, ದೀಪರ್ ಹೂಡಾ 52 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಹೋರಾಟ ನಡೆಸಿತ್ತು. ಇದರಲ್ಲಿ ಕೆಕೆಆರ್ ತಂಡ 7 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ನಿತೀಶ್ ರಾಣಾ 48 ರನ್ , ರಿಂಕು ಸಿಂಗ್ 52 ರನ್ ಗಳಿಸಿದ್ದರು.
ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ
ಲಕ್ನೋ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸಾಲಿಡ್ ಆಗಿದೆ. ಆರಂಭಿಕರಾಗಿ ಬರುವ ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡುತ್ತಿದ್ದಾರೆ. ಇದು ತಂಡದ ಪ್ಲಸ್ ಪಾಯಿಂಟ್ ಆಗಿದೆ. ಮಿಡಲ್ ಆರ್ಡರ್ ನಲ್ಲಿ ದೀಪಕ್ ಹೂಡಾ, ಕೃನಾಲ್ ಪಾಂಡ್ಯ ತಂಡಕ್ಕೆ ಆಧಾರವಾಗುತ್ತಿದ್ದಾರೆ. ಆದ್ರೆ ಮಾರ್ಕಸ್ ಸ್ಟೋಯ್ನಿಸ್ ವೈಫಲ್ಯ ತಂಡಕ್ಕೆ ಮೈನಸ್ ಪಾಯಿಂಟ್ ಆಗಿದೆ. ಆಯುಷ್ ಬದೋನಿ ಕೂಡ ಮೊದಲಿನ ಟಚ್ ನಲ್ಲಿ ಕಾಣಿಸುತ್ತಿಲ್ಲ. ಜೇಸನ್ ಹೋಲ್ಡರ್ ಅವರಿಂದ ಕೂಡ ಆಲ್ ರೌಂಡರ್ ಆಟ ಬರಬೇಕಿದೆ.
ಬೌಲಿಂಗ್ ನಲ್ಲಿ ಲಕ್ನೋ ತಂಡ ಬಲಿಷ್ಟವಾಗಿದೆ. ದುಷ್ಮಂತಾ ಚಮೀರಾ, ಮೊಹ್ನಿಸ್ ಖಾನ್, ಅವೇಶ್ ಖಾನ್ ವಿಕೆಟ್ ಪಡೆಯುತ್ತಿದ್ದಾರೆ. ಇವರಿಗೆ ಹೋಲ್ಡರ್, ಸ್ಟೋಯ್ನಿಸ್ ಸಾಥ್ ನೀಡಬೇಕಿದೆ. ರವಿ ಬಿಷ್ನೋಯಿ ದುಬಾರಿಯಾದ್ರೂ ವಿಕೆಟ್ ಪಡೆಯುತ್ತಿದ್ದಾರೆ.
ಇತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿಚಾರಕ್ಕೆ ಬಂದರೇ
ತಂಡದ ಕಾಂಬಿನೇಷನ್, ಬ್ಯಾಟಿಂಗ್ ಆರ್ಡರ್ ಸೇರಿದಂತೆ ನಾಯಕ ಶ್ರೇಯಸ್ ಅಯ್ಯರ್ ಮತ್ತು ಕೋಚ್ ಬ್ರೆಡಂ ಮೆಕ್ಕಲಂ ನಡುವೆ ಗೊಂದಲಗಳಿರುವುದು ಸತ್ಯ. ಮೇಲ್ನೋಟಕ್ಕೆ ಕೆಕೆಆರ್ ತಂಡ ಬಲಿಷ್ಠವಾಗಿದೆ. ತಂಡದಲ್ಲಿ ಸ್ಟಾರ್ ಆಟಗಾರರು ಇದ್ದಾರೆ. ಆದ್ರೆ ಸ್ಥಿರ ಪ್ರದರ್ಶನ ಮತ್ತು ಸಂಘಟಿತ ಆಟವನ್ನು ಆಡುತ್ತಿಲ್ಲ.
ಮುಖ್ಯವಾಗಿ ಸ್ಟಾರ್ ಪ್ಲೇಯರ್ಸ್ ನಿರೀಕ್ಷಿತ ಮಟ್ಟದಲ್ಲಿ ಆಡುತ್ತಿಲ್ಲ. ಆರಂಭಿಕ ವೆಂಕಟೇಶ್ ಅಯ್ಯರ್ ವೈಫಲ್ಯ ತಂಡಕ್ಕೆ ಮೈನಸ್ ಆಗುತ್ತಿದೆ. ಇನ್ನು ಆರೋನ್ ಫಿಂಚ್, ಆಂಡ್ರ್ಯೂ ರಸೆಲ್, ಸುನೀಲ್ ನರೇನ್ ಬ್ಯಾಟಿಂಗ್ ನಲ್ಲಿ ಸ್ಥಿರ ಆಟವನ್ನಾಡುತ್ತಿಲ್ಲ. ನಾಯಕ ಶ್ರೇಯಸ್ ಅಯ್ಯರ್ ಮತ್ತು ನಿತೇಶ್ ರಾಣಾ ಜವಾಬ್ದಾರಿಯಿಂದ ಆಡಿದ್ರೂ ತಂಡವನ್ನು ಗೆಲುವಿನ ದಡ ಸೇರಿಸಲು ಆಗುತ್ತಿಲ್ಲ.
ಇನ್ನು ಬೌಲಿಂಗ್ ವಿಚಾರಕ್ಕೆ ಬಂದರೇ ಬೌಲಿಂಗ್ನಲ್ಲಿ ಉಮೇಶ್ ಯಾದವ್ ಸ್ಥಿರತೆ ತಂದಿದ್ದಾರೆ. ಆದರೆ ಟಿಮ್ ಸೌಥಿ ಮತ್ತು ಶಿವಂ ಮಾವಿ ಲೈನ್ ಅಂಡ್ ಲೆಂಗ್ತ್ ಕಂಡುಕೊಳ್ಳಬೇಕಿದೆ. ಸುನೀಲ್ ನರೈನ್ ಮಿಸ್ಟ್ರಿ ಸ್ಪಿನ್ ಮತ್ತು ಅನುಕೂಲ್ ರಾಯ್ ಎಡಗೈ ಸ್ಪಿನ್ ಬಲ ತಂಡಕ್ಕಿದೆ. lsg vs kkr match prediction