ಕಾರ್ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ : ಕೋಟ್ಯಾಂತರ ಮೂಲದ ಐಷಾರಾಮಿ ಕಾರುಗಳು ಭಸ್ಮ…
ತಡರಾತ್ರಿ ಕಾರ್ ಗ್ಯಾರೇಜಿಗೆ ಬೆಂಕಿ ತಗುಲಿ ಕೋಟ್ಯಾಂತರ ರುಪಾಯಿ ಮೌಲ್ಯದ 10 ಕ್ಕೂ ಅಧಿಕ ಐಷಾರಾಮಿ ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನ ಕಸ್ತೂರಿ ನಗರದಲ್ಲಿ ಕಾರು ಗ್ಯಾರೇಜ್‌ನಲ್ಲಿ ನಡೆದಿದೆ.
ಕಸ್ತೂರಿನಗರದಲ್ಲಿರುವ ಚಾಂದ್ ಪಾಷ ಮತ್ತು ತಬರೇಜ್ ಪಾಷ ಎಂಬುವವರಿಗೆ ಸೇರಿದ ಗ್ಯಾರೇಜ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಐದಕ್ಕೂ ಅಧಿಕ ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗ್ಯಾರೇಜ್‌ನಲ್ಲಿ ಸ್ಟಾಟರ್ ಕೆಲಸ ಮಾಡುವಾಗ ಬೆಂಕಿ ಕಿಡಿ ಹಾರಿ ಈ ಅನಾಹುತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೇ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Luxury cars worth crores of rupees burned in garage in Bengaluru .








