ಬಿಎಸ್ ವೈ ಲಿಂಗಾಯತ ಸಮುದಾಯದ ಧೀಮಂತ ನಾಯಕ : ಎಂ.ಬಿ.ಪಾಟೀಲ್
ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಿಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಮಾಜಿ ಸಚಿವ ಎಂ.ಬಿ.ಪಾಟೀಲ್ ಬ್ಯಾಟ್ ಬೀಸಿದ್ದಾರೆ.
ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಎಂ.ಬಿ.ಪಾಟೀಲ್, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಿಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ಬರೆದುಕೊಂಡಿದ್ದಾರೆ.