ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಗೆ ಕೊರೊನಾ ದೃಢ
ಮೈಸೂರು : ವಿಧಾನ ಪರಿಷತ್ ಸದಸ್ಯ ಹಾಗೂ ನಿರ್ಮಾಪಕ ಸಂದೇಶ್ ನಾಗರಾಜ್ ಅವರಿಗೆ ಕೊರೊನಾ
ಸೋಂಕಿರೋದು ದೃಢಪಟ್ಟಿದೆ. ಈ ಹಿನ್ನೆಲೆ ಅವರ ಕುಟುಂಬದವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಸಂದೇಶ್ ನಾಗರಾಜ್ 3 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರ ಗಂಟಲು ದ್ರವದ ಪರೀಕ್ಷೆ ನಡೆಸಿದ ನಂತರ ಕೊರೊನಾ ಇರುವುದು ದೃಢಪಟ್ಟಿದೆ. ಸದ್ಯ ಸಂದೇಶ್ ನಾಗರಾಜ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಇತ್ತ ಅವರ ಕುಟುಂಬದವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದುಬಂದಿದೆ.