5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ… ಭದ್ರ ಕಾಲುವೆಯಲ್ಲಿ ಕಾರು ಮುಳುಗಡೆ..
ಐದು ದಿನಗಳ ಬಳಿಕ ಹೊನ್ನಳ್ಳಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಪತ್ತೆಯಾಗಿದೆ. ಚಂದ್ರಶೇಖರ್ ಅವರ ಕ್ರೆಟಾ ಕಾರು ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ 5 ದಿನಗಳ ಬಳಿಕ ಪತ್ತೆಯಾಗಿದೆ.
ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಸೊರಟುರು ತುಂಗಭದ್ರ ಕಾಲುವೆಯ ಬಳಿ ಕಾರು ಪತ್ತೆಯಾಗಿದ್ದು ಕಾರನ್ನ ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ. ಕಾರಿನ ಒಳಗಡೆ ಕೊಳತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಾರು ಪತ್ತೆಯಾದ ವಿಚಾರ ತಿಳಿದು ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ.
ಕಾರಿನ ಏರ್ ಬ್ಯಾಗ್ ತೆರೆದಿದ್ದು, ಹಿಂಭಾಗದಲ್ಲಿ ಶವ ಪತ್ತೆಯಾಗಿದೆ. ಮುಂಭಾಗದ ಗಾಜು ಒಡೆದಿದ್ದರೆ ಹಿಂಭಾಗದಲ್ಲಿ ಕಾರು ನಜ್ಜುಗುಜ್ಜಾಗಿದೆ. ಹೀಗಾಗಿ ಇದು ಅಪಘಾತವೇ ಅಥವಾ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದ್ಯಾ ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕಿದೆ.
m p renukacharya: The body of Renukacharya’s brother’s son was found after 5 days…