ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಎಂ.ವಿ ರಾಜಶೇಖರನ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
“ಕಾಂಗ್ರೆಸ್ ಪಕ್ಷದ ಹಿರಿಯನಾಯಕ ಎಂ.ವಿ.ರಾಜಶೇಖರನ್ ನಿಧನದಿಂದ ನಾವು ಒಬ್ಬ ಅನುಭವಿ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷದ ನಾಯಕರಾಗಿ, ಶಾಸಕ-ಸಂಸದರಾಗಿ,ಕೇಂದ್ರ ಸಚಿವರಾಗಿ ಅವರು ಸಲ್ಲಿಸಿರುವ ಸೇವೆ ಸದಾ ಸ್ಮರಣೀಯ.
ಅವರ ಅಗಲಿಕೆಯ ದು:ಖದಲ್ಲಿರುವ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಎಂ. ವಿ ರಾಜಶೇಖರನ್ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸರ್ಕಾರದಿಂದ ಸಂತಾಪ ವ್ಯಕ್ತಪಡಿಸಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದೆ. ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡಿಮೆ ಪೊಲೀಸರನ್ನು ನಿಯೋಜಿಸಿ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ.








