ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಂ.ಟಿ.ಬಿ. ಆರ್.ಶಂಕರ್, ಹೆಚ್. ವಿಶ್ವನಾಥ್ ಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ಸಹಮತ : ಅಂತಿಮ ತೀರ್ಮಾನ ಕೇಂದ್ರಕ್ಕೆ ಬಿಟ್ಟಿದ್ದು

admin by admin
June 16, 2020
in Newsbeat, ರಾಜಕೀಯ
Share on FacebookShare on TwitterShare on WhatsappShare on Telegram

Related posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

April 7, 2026
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

April 7, 2026

ಬೆಂಗಳೂರು : ಎಂ.ಟಿ.ಬಿ ನಾಗರಾಜ್, ಆರ್.ಶಂಕರ್, ಹಾಗೂ ಹೆಚ್. ವಿಶ್ವನಾಥ್ ಗೆ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ವಿಧಾನ ಪರಿಷತ್ ಚುನಾವಣೆಯ ಟಿಕೆಟ್ ಯಾರಿಗೆ ನೀಡಬೇಕು ಎಂದು ಚರ್ಚಿಸಲು ಬಿಜೆಪಿಯ ಕೊರ್ ಕಮಿಟಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಎಂ.ಟಿ.ಬಿ ನಾಗರಾಜ್, ಆರ್.ಶಂಕರ್,  ಹೆಚ್. ವಿಶ್ವನಾಥ್ , ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ  ಸುಧೀರ್ಘ ಚರ್ಚೆ ನಡೆದಿದೆ.

ಈ ವೇಳೆ ಹೆಚ್. ವಿಶ್ವನಾಥ್ ಅವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಕೆಲ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಯಾಕೆಂದರೆ ಆರ್, ಶಂಕರ್ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ. ಎಂ.ಟಿ.ಬಿ ನಾಗರಾಜ್ ಬಿಜೆಪಿಯ ಬಂಡಾಯ ಅಭ್ಯರ್ಥಿ ಎದರು ಸೋಲು ಕಂಡಿದ್ದಾರೆ. ಒಂದು ವೇಳೆ ಬಂಡಾಯ ಅಭ್ಯರ್ಥಿ ಇಲ್ಲದಿದ್ದರೆ ಗೆದ್ದು ಬರುತ್ತಿದ್ದರು. ಆದರೆ ವಿಶ್ವನಾಥ್ ಉಪಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಆದರೂ ಅವರಿಗೆ ವಿಧಾನ ಪರಿಷತ್ ಟಿಕೆಟ್ ಕೊಡುವುದ ಸರಿಯಲ್ಲ ಎಂಬ ಅಭಿಪ್ರಾಯ  ಸಭೆಯಲ್ಲಿ ವ್ಯಕ್ಯವಾಗಿದೆ ಎನ್ನಲಾಗಿದೆ.

ಸಾಕಷ್ಟು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ  ಎಂ.ಟಿ.ಬಿ ನಾಗರಾಜ್, ಆರ್.ಶಂಕರ್, ಹೆಚ್. ವಿಶ್ವನಾಥ್, ಮಾಜಿ ಶಾಸಕ ಸುನೀಲ್ ವಲ್ಲ್ಯಾಪುರೆ  ಟಿಕೆಟ್ ನೀಡುವ ವಿಚಾರಕ್ಕೆ ಸಭೆ ಸಹಮತ ವ್ಯಕ್ತಪಡಿಸಿದೆ. ಜೊತೆಗೆ ರಾಜ್ಯಸಭೆ ಟಿಕೆಟ್ ಆಯ್ಕೆಯಲ್ಲಿ ಕೇಂದ್ರ ಸಮಿತಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ರಾಜ್ಯ ಕೋರ್ ಕಮಿಟಿ ಸಹಮತ ವ್ಯಕ್ತಪಡಿಸಿದ ಹೆಸರುಗಳನ್ನು ಅಂತಿಮ ಮಾಡುವಂತೆ ಕೇಂದ್ರ ಸಮಿತಿ ಮೇಲೆ ಒತ್ತಡ ಹಾಕಲು ತಂತ್ರ ರೂಪಿಸಿದೆ. ಅದಕ್ಕಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ನಾಯಕರಾದ ಪ್ರಹ್ಲಾದ್ ಜೋಶಿ, ಡಿ.ವಿ ಸದಾನಂದಗೌಡ  ಸೇರಿ ಬಿಜೆಪಿ ವರಿಷ್ಠರ ಜೊತೆ ಸಮಾಲೋಚನೆ ನಡೆಸುವ ತೀರ್ಮಾನಕ್ಕೆ ಕೋರ್ ಕಮಿಟಿ ಸಭೆ ಬಂದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವರಸೆ ಬದಲಿಸಿದ ರಾಜ್ಯ ಬಿಜೆಪಿ

ಯಾವುದೇ ಚುನಾವಣೆ ಆಗಲಿ, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ  ಚರ್ಚೆ ನಡೆಸುತ್ತದೆ. ಸಭೆ ಬಳಿಕ ಚರ್ಚಿತವಾದ ಹೆಸರುಗಳನ್ನು ಲಿಖಿತ ರೂಪದಲ್ಲಿ ಕೇಂದ್ರಕ್ಕೆ ರವಾನೆ ಮಾಡುತ್ತದೆ. ಆದರೆ ಈ ಬಾರಿ ರಾಜ್ಯ ಬಿಜೆಪಿ ತನ್ನ ವರಸೆ ಬದಲಿಸಿದೆ. ರಾಜ್ಯಸಭೆ ಟಿಕೆಟ್ ವಿಷಯದಲ್ಲಿ ರಾಜ್ಯ ಕೋರ್ ಕಮಿಟಿ ಹೆಸರುಗಳನ್ನು ಫೈನಲ್ ಮಾಡಿ ಕೇಂದ್ರಕ್ಕೆ ಕಳಿಸಿತ್ತು. ಆದರೆ ಕೇಂದ್ರ ಸಮಿತಿ ಅಂತಿಮ ಕ್ಷಣದಲ್ಲಿ ಕಳಿಸಿರುವ ಲಿಖಿತ ಪಟ್ಟಿಗೆ ಮನ್ನಣೆ ನೀಡದೆ. ಪಕ್ಷದ ಸಾಮಾನ್ಯ ಕಾರ್ಯಕರ್ತರ ಹೆಸರುಗಳನ್ನು ಘೋಷಣೆ ಮಾಡಿತ್ತು. ಇದರಿಂದಾಗಿ ರಾಜ್ಯ ಬಿಜೆಪಿ ಮುಖಭಂಗ ಅನುಭವಿಸಿತ್ತು. ಇದೀಗ ರಾಜ್ಯ ವಿಧಾನ ಪರಿಷತ್ ಟಿಕೆಟ್ ವಿಚಾರದಲ್ಲಿ ಅದೆ ಮಾದರಿ ಮುಖಭಂಗ  ಅನುಭವಿಸಬಾರದು ಎಂಬ ಕಾರಣಕ್ಕೆ ಹೆಸರುಗಳನ್ನು ಲಿಖಿತ ರೂಪದಲ್ಲಿ ಕಳಿಸಿಲ್ಲ . ಆದರೆ ಚರ್ಚಿತವಾದ ಹೆಸರುಗಳನ್ನು ಕೇಂದ್ರ ನಾಯಕರ  ಮುಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಸ್ತಾಒ ಮಾಡಬೇಕು ಎಂದು ಸಭೆ ತೀರ್ಮಾನ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags: BJP...MLC
ShareTweetSendShare
Join us on:

Related Posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
April 7, 2026
0

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುವ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು...

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

by Shwetha
April 7, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ಬಿಸಿಬಿಸಿ ಚರ್ಚೆಗಳು ಮತ್ತು ವದಂತಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಇದೀಗ...

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

by Shwetha
April 7, 2026
0

ಸದ್ಯಕ್ಕೆ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್...

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

by Shwetha
April 7, 2026
0

ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು...

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

by Shwetha
April 7, 2026
0

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram